alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಧರ್ಮೇಂದ್ರ ಪ್ರಧಾನ್

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಕಾಣುತ್ತಿದ್ದು, ಅದಕ್ಕನುಗುಣವಾಗಿ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ನಿಗದಿ ಮಾಡುತ್ತಿವೆ.

ಏರಿಕೆಯ ಹಾದಿಯನ್ನು ಹಿಡಿದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರ ಗಳು ಕಳೆದ ಮೂರ್ನಾಲ್ಕು ದಿನಗಳಿಂದ ಇಳಿಕೆಯತ್ತ ಸಾಗಿದರೂ ಇದು ಪೈಸೆಗಳ ಲೆಕ್ಕದಲ್ಲಿ ಇಳಿಕೆಯಾಗುತ್ತಿರುವುದು ವಾಹನ ಸವಾರರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದರ ಮಧ್ಯೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ದೀರ್ಘಾವಧಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಸುಳಿವನ್ನು ಸಚಿವರು ನೀಡಿದ್ದು, ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಗಣನೀಯವಾಗಿ ಕಡಿಮೆ ಆಗುವ ಸಾಧ್ಯತೆಯಿದೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ಯಾವಾಗ ತರಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿರುವ ಧರ್ಮೇಂದ್ರ ಪ್ರಧಾನ್, ಜಿ ಎಸ್ ಟಿ ಸಮಿತಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...