alex Certify
ಕನ್ನಡ ದುನಿಯಾ       Mobile App
       

Kannada Duniya

ಯೂಟರ್ನ್ ಹೊಡೆದ ಪೇಟಿಎಂ

paytm-rolls-back-2-fee-for-recharges-via-credit-cardsಕ್ರೆಡಿಟ್ ಕಾರ್ಡ್ ಮೂಲಕ ಪೇಟಿಎಂ ವಾಲೆಟ್ ರೀ ಚಾರ್ಜ್ ಮಾಡುವ ಗ್ರಾಹಕರಿಗೆ ಶೇ.2 ರಷ್ಟು ಶುಲ್ಕ ವಿಧಿಸುವ ನಿರ್ಧಾರವನ್ನು ಗುರುವಾರದಂದು ಪ್ರಕಟಿಸಿದ್ದ ಡಿಜಿಟಲ್ ವಾಲೆಟ್ ಕಂಪನಿ ಪೇಟಿಎಂ ಇಂದು ಯೂಟರ್ನ್ ಹೊಡೆದಿದೆ.

ಕ್ರೆಡಿಟ್ ಕಾರ್ಡ್ ಮೂಲಕ ರೀ ಚಾರ್ಜ್ ಮಾಡುವ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲವೆಂದು ಪೇಟಿಎಂ ತಿಳಿಸಿದ್ದು, ಕ್ರೆಡಿಟ್ ಕಾರ್ಡ್ ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಇದು ಹೊರೆಯಾಗುವ ಪರಿಣಾಮ ಶುಲ್ಕ ವಿಧಿಸುವ ತೀರ್ಮಾನದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದೆ.

ಕ್ರೆಡಿಟ್ ಕಾರ್ಡ್ ದುರ್ಬಳಕೆ ತಡೆಯಲು ಇನ್ನಷ್ಟು ಬಿಗಿ ಕ್ರಮಗಳನ್ನು ಪೇಟಿಎಂ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಳೆದ ವರ್ಷದ ನವೆಂಬರ್ ನಲ್ಲಿ 1000 ರೂ. ಹಾಗೂ 2000 ರೂ. ಹಳೆ ನೋಟುಗಳನ್ನು ಕೇಂದ್ರ ಸರ್ಕಾರ ಹಿಂಪಡೆದು ಡಿಜಿಟಲ್ ಪಾವತಿಗೆ ಪ್ರೋತ್ಸಾಹ ನೀಡುತ್ತಿರುವ ಕಾರಣ ಪೇಟಿಎಂ ವಹಿವಾಟಿನಲ್ಲಿ ಭಾರೀ ಹೆಚ್ಚಳವಾಗಿದ್ದು, ಕ್ರೆಡಿಟ್ ಕಾರ್ಡ್ ರೀ ಚಾರ್ಜ್ ಗೆ ಶುಲ್ಕ ವಿಧಿಸುವ ನಿರ್ಧಾರ ಹೊರ ಬಿದ್ದ ಬಳಿಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಗ್ರಾಹಕರು ಹಾಗೂ ವ್ಯಾಪಾರಸ್ಥರ ಹಿತದೃಷ್ಟಿಯಿಂದ ಕಂಪನಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...