alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ‘ಎಟಿಎಂ’ಗಳಲ್ಲಿ ಹಣ ಪಡೆಯಲು ಇನ್ಮುಂದೆ ಬೇಕಿಲ್ಲ ‘ಕಾರ್ಡ್’

ಎಟಿಎಂ ಬಳಕೆದಾರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಇನ್ನು ಮುಂದೆ ಎಟಿಎಂಗಳಲ್ಲಿ ಹಣ ಪಡೆಯಲು ಕಾರ್ಡ್ ಬೇಕೆಂದಿಲ್ಲ. ಮೊಬೈಲ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವುದರಿಂದ ಹಣ ಪಡೆಯಬಹುದಾಗಿದೆ.

ಇಂಥದೊಂದು ತಂತ್ರಜ್ಞಾನವನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಎಟಿಎಂಗಳಲ್ಲಿ ಅಳವಡಿಸಲು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾದ ಅನುಮತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಯುಪಿಐ ಆಪ್ ಮೂಲಕ ವಹಿವಾಟು ನಡೆಸುತ್ತಿರುವವರಿಗೆ ಈ ಸೌಲಭ್ಯ ಲಭ್ಯವಾಗಲಿದ್ದು, ನೂತನ ತಂತ್ರಜ್ಞಾನ ಅಳವಡಿಸಿದ ಬಳಿಕ ಇದಕ್ಕಾಗಿ ಅಭಿವೃದ್ಧಿಪಡಿಸಿರುವ ಆಪ್ ಅನ್ನು ಮೊಬೈಲ್ ನಲ್ಲಿ ಅಳವಡಿಸಿಕೊಂಡರೆ ಎಟಿಎಂ ಯಂತ್ರದ ಮುಂದೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಹಣ ಪಡೆಯಬಹುದಾಗಿದೆ. ಈ ತಂತ್ರಜ್ಞಾನ ಜಾರಿಗೆ ಬಂದ ಬಳಿಕ, ಸದ್ಯ ಎಟಿಎಂ ಕಾರ್ಡ್ ಬಳಕೆ ವೇಳೆ ನಡೆಯುತ್ತಿರುವ ವಂಚನೆ ಪ್ರಕರಣಗಳಿಗೆ ಕಡಿವಾಣ ಬೀಳುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...