alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ಸುದ್ದಿ: ಇಂದೂ ಏರಿಕೆಯಾಗಿದೆ ಪೆಟ್ರೋಲ್-ಡೀಸೆಲ್ ಬೆಲೆ

ಭಾರತದಲ್ಲಿ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಗೆ ಕಡಿವಾಣ ಬೀಳ್ತಾನೆ ಇಲ್ಲ. ಈಗಾಗ್ಲೇ 80 ರ ಗಡಿ ದಾಟಿರುವ ತೈಲ ದರ ಶನಿವಾರ ಕೂಡ ಮೇಲಕ್ಕೆ ಜಿಗಿದಿದೆ. ದೇಶದ ಮೆಟ್ರೋ ಪಾಲಿಟಿನ್ ನಗರಗಳಲ್ಲಿ ವಾರಾಂತ್ಯದಲ್ಲಿ ಕೂಡ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಭಾರೀ ಬದಲಾವಣೆ ಕಂಡು ಬಂದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನ ಶನಿವಾರದ ತೈಲ ಬೆಲೆಯಲ್ಲಿ ಪೆಟ್ರೋಲ್ 39 ಪೈಸೆ ಮತ್ತು ಡೀಸೆಲ್ ಬೆಲೆ 44 ಪೈಸೆಗಳಷ್ಟು ಏರಿಕೆ ಕಂಡಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 80 ರೂಪಾಯಿ 38 ಪೈಸೆಗಳಾಗಿದ್ದರೆ, ಡೀಸೆಲ್ ದರ ಪ್ರತಿ ಲೀಟರ್ ಗೆ 72 ರೂಪಾಯಿ 51 ಪೈಸೆ ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 88.87 ರೂಪಾಯಿ, ಡೀಸೆಲ್ 76.98 ರೂಪಾಯಿ ಪ್ರತಿ ಲೀಟರ್ ಗೆ ಆಗಿದೆ.

ಬ್ರ್ಯಾಂಡ್ ಮತ್ತು ನಾನ್ ಬ್ರ್ಯಾಂಡ್ ಪೆಟ್ರೋಲ್ ಡೀಸೆಲ್ ದರದಲ್ಲಿ ಕೂಡ ಬಹುತೇಕ ದರ ಏರಿಕೆಯ ದರ್ಬಾರು ನಡೆಯುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಿದೆ ಅನ್ನೋ ಕಾರಣವನ್ನು ಕೇಂದ್ರ ಸರ್ಕಾರ ಹೇಳುತ್ತಿದೆ. ಹೆಚ್ಚುತ್ತಿರುವ ತೈಲ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕ್ರಮ ಕೈಗೊಳ್ಳಬೇಕು ಅಂತ ಜನ ಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪೆಟ್ರೋಲ್-ಡೀಸೆಲ್ ಕೂಡ ಜಿಎಸ್ಟಿ ವ್ಯಾಪ್ರಿಗೆ ತರಬೇಕು ಅಂತ ಜನರು ಬೇಡಿಕೆ ಇಡ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...