alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ಮಧ್ಯೆ ‘ಶ್ರೀ ಸಾಮಾನ್ಯ’ನಿಗೆ ಮತ್ತೊಂದು ಬರೆ

ಪೆಟ್ರೋಲ್ ಹಾಗೂ ಡೀಸಲ್ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವ ಪರಿಣಾಮ ವಾಹನ ಸವಾರರ ಜೇಬಿಗೆ ಕತ್ತರಿ ಬೀಳುತ್ತಿದ್ದು, ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿರುವ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟವನ್ನೆದುರಿಸುವಂತಾಗಿದೆ.

ಇದರ ಮಧ್ಯೆ ಶ್ರೀಸಾಮಾನ್ಯರು ಈಗ ಮತ್ತೊಂದು ಹೊರೆಯನ್ನು ಹೊರಬೇಕಾಗಿ ಬಂದಿದ್ದು, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಪರಿಣಾಮ ರಾಜ್ಯ ಸರ್ಕಾರ, ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 18ರಷ್ಟು ಹೆಚ್ಚಳ ಮಾಡಲು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ದಿನೇ ದಿನೇ ಇಂಧನ ಬೆಲೆ ಏರಿಕೆಯಾಗುತ್ತಿರುವ ಪರಿಣಾಮ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಪರಿಷ್ಕೃತ ದರಗಳು ಮುಂದಿನ ವಾರದಿಂದಲೇ ಜಾರಿಗೆ ಬರಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...