alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಕ್ಕೆ ಕಂಟಕ ತರುತ್ತಾ ಪೆಟ್ರೋಲ್-ಡೀಸೆಲ್ ದರ ಏರಿಕೆ…?

ದಿನನಿತ್ಯ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕಿಳಿಯುತ್ತಿರುವ ಕಾರಣ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ಪರಿಣಾಮವನ್ನು ಶ್ರೀಸಾಮಾನ್ಯರು ಎದುರಿಸಬೇಕಾಗಿ ಬಂದಿದೆ.

ಪ್ರತಿನಿತ್ಯವೂ ಅಂತರರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ತೈಲ ಬೆಲೆಯನ್ನು ನಿಗದಿ ಮಾಡುತ್ತಿರುವ ಕಾರಣ ಲಂಗುಲಗಾಮಿಲ್ಲದೆ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಇಂತಹ ಪರಿಸ್ಥಿತಿ ಎದುರಾಗಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜೊತೆಗೆ ಮೈತ್ರಿಕೂಟ ಪಕ್ಷಗಳು, ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಸರ್ಕಾರಕ್ಕೆ ತೈಲ ಬೆಲೆ ಏರಿಕೆ ನುಂಗಲಾರದ ತುತ್ತಾಗಿದೆ.

ತೈಲ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರಬೇಕೆಂಬ ಒತ್ತಾಯಗಳು ಪ್ರತಿಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಿಂದಲೂ ಕೇಳಿಬರುತ್ತಿದ್ದು, ಕೇಂದ್ರ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುವುದೆಂಬುದನ್ನು ಕಾದು ನೋಡಬೇಕಿದೆ.

ಪೆಟ್ರೋಲ್-ಡಿಸೇಲ್ ದರ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಅಸಹಾಯಕವಾಗಿದ್ದು, ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...