alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರ ನಿದ್ರೆಗೆಡಿಸ್ತು ಬೆಲೆ ಏರಿಕೆ

ವಾಹನ ಸವಾರರ ಜೇಬಿಗೆ ನಿರಂತರವಾಗಿ ಕತ್ತರಿ ಬೀಳ್ತಿದೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯಾಗ್ತಿದೆ. ಸೋಮವಾರ ಕೂಡ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವೇ ಈ ಬೆಲೆ ಏರಿಕೆಗೆ ಕಾರಣ ಎನ್ನಲಾಗ್ತಿದೆ.

ಸೋಮವಾರ ದೆಹಲಿಯಲ್ಲಿ ಲೀಟರ್ ಡಿಸೇಲ್ ಬೆಲೆ 69.46 ರೂಪಾಯಿಯಾಗಿತ್ತು. ಮಂಗಳವಾರ ಬೆಲೆ 69.51 ರೂಪಾಯಿಗೆ ಬಂದು ನಿಂತಿದೆ. ಪೆಟ್ರೋಲ್ ಬೆಲೆ 77.96 ರೂಪಾಯಿ ಪ್ರತಿ ಲೀಟರ್ ಆಗಿದೆ. ರೂಪಾಯಿ ಮೌಲ್ಯ ಕುಸಿತದಿಂದಾಗಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಇದು ಪೆಟ್ರೋಲ್-ಡಿಸೇಲ್ ಬೆಲೆ ಮೇಲೆ ಪ್ರಭಾವ ಬೀರುತ್ತಿದೆ.

ಬೇರೆ ಮೆಟ್ರೋ ನಗರಗಳಿಗೆ ಹೋಲಿಸಿದ್ರೆ ದೆಹಲಿಯಲ್ಲಿ ಪೆಟ್ರೋಲ್-ಡಿಸೇಲ್ ಬೆಲೆ ಕಡಿಮೆಯಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 85.38 ರೂಪಾಯಿ ಪ್ರತಿ ಲೀಟರ್ ಮಾರಾಟವಾಗ್ತಿದೆ. ವರದಿ ಪ್ರಕಾರ ಕಳೆದ 13 ದಿನಗಳಿಂದ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ನಿರಂತರ ಏರಿಕೆಯಾಗ್ತಿದೆ. 13 ದಿನಗಳಲ್ಲಿ ಪೆಟ್ರೋಲ್ ಬೆಲೆ 82 ಪೈಸೆ ಹಾಗೂ ಡಿಸೇಲ್ ಬೆಲೆ 79 ಪೈಸೆ ಹೆಚ್ಚಳವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...