alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್ ಬೆಲೆ ಇಂದು ಏರಿಕೆಯಾಗಿದ್ದೆಷ್ಟು?

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಹಾಗೂ ಡೀಸೆಲ್ ದರ ಗರಿಷ್ಟ ಮಟ್ಟಕ್ಕೆ ಬಂದು ನಿಂತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗೆ ಅನುಗುಣವಾಗಿ ದೇಶದಲ್ಲೂ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ದರ ನಿರ್ಧಾರವಾಗುತ್ತಿದೆ.

ಇಂದೂ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರದಲ್ಲಿ 5 ಪೈಸೆ ಹಾಗೂ ಡೀಸೆಲ್ ದರದಲ್ಲಿ 18 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 72.43 ರೂ. ಗಳಾಗಿದ್ದರೆ ಡೀಸೆಲ್ ದರ 63.38 ರೂ. ಗಳಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ದರ 80 ರೂ. ದಾಟಿದ್ದು, ಡೀಸೆಲ್ ದರ 67.50 ರೂ. ಗಳಾಗಿದೆ. ವ್ಯಾಟ್ ನಿಂದಾಗಿ ಮುಂಬೈನಲ್ಲಿ ಇಷ್ಟು ದರವೆಂದು ಹೇಳಲಾಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿನ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದು, ಹೀಗಾಗಿ ಮುಂಬರುವ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸುವಂತೆ ತೈಲ ಸಚಿವಾಲಯ, ಹಣಕಾಸು ಸಚಿವರನ್ನು ಕೋರಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...