alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಬಿತ್ತು ಬ್ರೇಕ್

ಕಳೆದ 6 ದಿನಗಳಿಂದ ನಿರಂತರವಾಗಿ ಇಳಿಕೆ ಕಾಣ್ತಿದ್ದ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಇಂದು ಬ್ರೇಕ್ ಬಿದ್ದಿದೆ. ಬುಧವಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಬುಧವಾರ ಒಂದು ಲೀಟರ್ ಪೆಟ್ರೋಲ್ ಬೆಲೆ ಮಂಗಳವಾರದ ಬೆಲೆಯಲ್ಲಿಯೇ ಮಾರಾಟವಾಗ್ತಿದೆ. ದೆಹಲಿಯಲ್ಲಿ ಸದ್ಯ ಒಂದು ಲೀಟರ್ ಪೆಟ್ರೋಲ್ ಬೆಲೆ 75.55 ರೂಪಾಯಿಯಾದ್ರೆ ಒಂದು ಲೀಟರ್ ಡಿಸೇಲ್ ಬೆಲೆ 67.38 ರೂಪಾಯಿಯಾಗಿದೆ. ಮಂಗಳವಾರ ಪೆಟ್ರೋಲ್ ಬೆಲೆಯಲ್ಲಿ 14 ರಿಂದ 18 ಪೈಸೆಯವರೆಗೆ ಇಳಿಕೆಯಾಗಿತ್ತು. ಡಿಸೇಲ್ ಬೆಲೆ 10 ರಿಂದ 12 ಪೈಸೆ ಪ್ರತಿ ಲೀಟರ್ ಗೆ ಇಳಿಕೆಯಾಗಿತ್ತು.

ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ. ಬುಧವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಬ್ಯಾರಲ್ ಬೆಲೆ 76 ಡಾಲರ್ ಗೆ ಬಂದು ನಿಂತಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಈ ಮಧ್ಯೆ ಮಂಗಳವಾರ ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ಅವಕಾಶ ನೀಡುವುದಿಲ್ಲ. ಜನಸಾಮಾನ್ಯರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ನಡೆಯುತ್ತಿದೆ ಎಂದು ಭರವಸೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...