alex Certify
ಕನ್ನಡ ದುನಿಯಾ       Mobile App
       

Kannada Duniya

16 ದಿನಗಳ ನಂತ್ರ ಕೊನೆಗೂ ಇಳೀತು ಪೆಟ್ರೋಲ್-ಡಿಸೇಲ್ ಬೆಲೆ

ಕರ್ನಾಟಕ ಚುನಾವಣೆ ನಂತ್ರ ಒಂದೇ ಸಮನೆ ಏರುತ್ತಿದ್ದ ಪೆಟ್ರೋಲ್-ಡಿಸೇಲ್ ಬೆಲೆ ವಾಹನ ಸವಾರರ ಜೇಬಿಗೆ ಬೆಂಕಿ ಹಚ್ಚಿತ್ತು. 16 ದಿನಗಳ ಕಾಲ ಸತತವಾಗಿ ಏರಿಕೆ ಕಂಡ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬುಧವಾರ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 60 ಪೈಸೆ ಹಾಗೂ ಲೀಟರ್ ಡಿಸೇಲ್ ಬೆಲೆಯಲ್ಲಿ 56 ಪೈಸೆ ಇಳಿಕೆಯಾಗಿದೆ.

ಸದ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 77.83ಕ್ಕೆ ಬಂದು ನಿಂತಿದೆ. ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 68.75 ರೂಪಾಯಿಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗ್ತಿದ್ದಂತೆ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.

ಈ ಬಗ್ಗೆ ಸಭೆ ನಡೆಸಿದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಬಗ್ಗೆ ದೀರ್ಘಕಾಲದ ಪರಿಹಾರಕ್ಕೆ ಪ್ರಯತ್ನ ನಡೆಸುತ್ತಿದ್ದೇವೆ. ಆತುರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲವೆಂದು ಸರ್ಕಾರ ಹೇಳಿತ್ತು. ಸದ್ಯದಲ್ಲಿ ನೆಮ್ಮದಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...