alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಬಿಗ್ ಶಾಕ್ ! 2013 ರ ಮಟ್ಟವನ್ನೂ ಮೀರಿದ ಪೆಟ್ರೋಲ್-ಡಿಸೇಲ್ ಬೆಲೆ

ಭಾನುವಾರದಂದು ಪೆಟ್ರೋಲ್ ಬೆಲೆಯಲ್ಲಿ 33 ಪೈಸೆ ಹಾಗೂ ಡಿಸೇಲ್ ಬೆಲೆಯಲ್ಲಿ 26 ಪೈಸೆ ಏರಿಕೆಯಾಗುವ ಮೂಲಕ ಇದುವರೆಗಿನ ಅತ್ಯಧಿಕ ಮಟ್ಟವನ್ನೂ ಮೀರಿಸಿದೆ. 2013 ರ ಏಪ್ರಿಲ್ 14 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 76.06 ರೂ. ಗಳಾಗಿದ್ದು, ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ 76.24 ರೂ. ಗಳಾಗುವ ಮೂಲಕ ಆ ದಾಖಲೆಯನ್ನು ಮುರಿದಿದೆ. ಡಿಸೇಲ್ ಬೆಲೆಯಲ್ಲೂ ಏರಿಕೆಯಾಗಿದ್ದು 67.57 ರೂ. ತಲುಪಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ನಿರಂತರವಾಗಿ ಏರುತ್ತಿರುವ ಕಾರಣ ಭಾರತೀಯ ತೈಲ ಕಂಪನಿಗಳು ಅದಕ್ಕೆ ಅನುಗುಣವಾಗಿ ಪೆಟ್ರೋಲ್-ಡಿಸೇಲ್ ಬೆಲೆಯನ್ನು ಏರಿಕೆ ಮಾಡುತ್ತಿವೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಿದ್ದ ಹಿನ್ನಲೆಯಲ್ಲಿ ಪ್ರತಿನಿತ್ಯ ತೈಲಬೆಲೆಯನ್ನು ನಿರ್ಧರಿಸುತ್ತಿದ್ದ ತೈಲ ಕಂಪನಿಗಳು ಸತತ 19 ದಿನಗಳ ಯಾವುದೇ ಏರಿಕೆ ಮಾಡಿರಲಿಲ್ಲ.

ಈ ಸಂದರ್ಭದಲ್ಲಿ ತೈಲ ಕಂಪನಿಗಳಿಗೆ ಭಾರೀ ನಷ್ಟವುಂಟಾಗಿದೆ ಎನ್ನಲಾಗಿದ್ದು, ಅದನ್ನು ಸರಿದೂಗಿಸಲು ತೈಲ ಕಂಪನಿಗಳು ಚುನಾವಣೆ ಬಳಿಕ ಪ್ರತಿ ದಿನವೂ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಏರಿಕೆ ಮಾಡುತ್ತಿದ್ದು, ಕಳೆದ ಒಂದು ವಾರದಿಂದ ಪೆಟ್ರೋಲ್ ಬೆಲೆಯಲ್ಲಿ 1.61 ರೂ. ಏರಿಕೆಯಾಗಿದ್ದರೆ, ಡಿಸೇಲ್ ಬೆಲೆಯಲ್ಲಿ 1.64 ರೂ. ಏರಿಕೆಯಾಗಿದೆ.

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳೂ ದುಬಾರಿಯಾಗುತ್ತಿದ್ದು, ಶೀಘ್ರದಲ್ಲೇ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಎನ್ನಲಾಗಿದ್ದು, ವಾಹನ ಸವಾರರಿಗೆ ಶಾಕ್ ಕಾದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...