alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಮಾಲೀಕರಿಗೆ ಕಾದಿದೆಯಾ ಕಹಿ ಸುದ್ದಿ…?

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಮೇಲಿನ ಬೆಲೆ ಏರಿಳಿತದ ಆಧಾರದ ಮೇಲೆ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರಗಳು ದೈನಂದಿನವಾಗಿ ಏರಿಳಿತ ಕಾಣುತ್ತಿದ್ದು, ಇದೀಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆ ಕಾಣುತ್ತಿರುವ ಕಾರಣ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ.

ನವೆಂಬರ್ 2 ರಂದು ಪ್ರತಿ ಬ್ಯಾರೆಲ್ ಕಚ್ಚಾ ತೈಲಕ್ಕೆ 3815.80 ರೂ. ದರವಿದ್ದು, ನವೆಂಬರ್ 3 ಕ್ಕೆ ಈ ದರ 3849.43 ರೂ. ಗಳಾಗಿದೆ. ಈ ದಿಢೀರ್ ದರ ಏರಿಕೆಗೆ ಅಂತರಾಷ್ಟ್ರೀಯ ವಿದ್ಯಾಮಾನಗಳು ಕಾರಣವಾಗಿದ್ದು, ಇದರ ಪರಿಣಾಮವನ್ನು ಭಾರತೀಯ ಗ್ರಾಹಕರು ಎದುರಿಸಬೇಕಾಗಿದೆ.

ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದ್ದು, ಸಹಜವಾಗಿ ಭಾರತದ ಪೆಟ್ರೋಲ್ ಹಾಗೂ ಡಿಸೇಲ್ ದರದ ಮೇಲೆ ಪರಿಣಾಮ ಬೀರಲಿದೆ. ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ ಕುರಿತು ಜನಸಾಮಾನ್ಯರಲ್ಲಿ ಅಸಮಾಧಾನ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ, ಕೆಲ ದಿನಗಳ ಹಿಂದಷ್ಟೇ ಅಬ್ಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು, ಇದೀಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚಳವಾಗುವ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಮತ್ತೆ ತುಟ್ಟಿಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...