alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರದಲ್ಲಿಯೇ ಕಾದಿದೆ ಬೆಲೆ ಏರಿಕೆಯ ಮತ್ತೊಂದು ‘ಶಾಕ್’

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರು, ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲೆ ಮತ್ತಷ್ಟು ಸೆಸ್ ವಿಧಿಸಿರುವ ಕಾರಣ ಕಂಗಾಲಾಗಿದ್ದಾರೆ.

ಪೆಟ್ರೋಲ್-ಡೀಸೆಲ್ ದರ ಏರಿಕೆಯಾದರೆ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವುದು ಸಾಮಾನ್ಯ ಸಂಗತಿಯಾಗಿದ್ದು, ಇದರ ಮಧ್ಯೆ ಮತ್ತೊಂದು ಹೊರೆ ಸದ್ಯದಲ್ಲೇ ಬೀಳಲಿದೆ ಎನ್ನಲಾಗಿದೆ.

ಡೀಸೆಲ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಖಾಸಗಿ ಪ್ರವಾಸಿ ಟ್ಯಾಕ್ಸಿ ಮಾಲೀಕರು ಪ್ರಯಾಣ ದರ ಏರಿಸಲು ಮುಂದಾಗಿದ್ದು, ಶೇ. 5 ರಿಂದ 10 ರಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.

ಬೆಂಗಳೂರಿನಂತಹ ಮಹಾನಗರಗಳಲ್ಲಿ ಬಹುತೇಕ ಮಂದಿ, ತಮ್ಮ ದೈನಂದಿನ ಪ್ರಯಾಣಕ್ಕಾಗಿ ಖಾಸಗಿ ಟ್ಯಾಕ್ಸಿಗಳನ್ನೇ ಅವಲಂಬಿಸಿಕೊಂಡಿದ್ದು, ಅವರುಗಳಿಗೆ ಈ ದರ ಏರಿಕೆಯ ಬಿಸಿ ತಟ್ಟಲಿದೆ.

ಪೆಟ್ರೋಲ್-ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ ಈಗಾಗಲೇ ದೈನಂದಿನ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಅದರ ಮೇಲೆ ಬರೆ ಎಳೆದಂತೆ ಇದೂ ಸಹ ಜನ ಸಾಮಾನ್ಯರನ್ನು ತಟ್ಟಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...