alex Certify
ಕನ್ನಡ ದುನಿಯಾ       Mobile App
       

Kannada Duniya

GST: ವಾಹನ ಸವಾರರಿಗೆ ಸಿಗುತ್ತಾ ಸಿಹಿ ಸುದ್ದಿ..?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಮಂಡಳಿ ಸಭೆ ಇಂದು ನಡೆಯಲಿದ್ದು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರುವ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತಂದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ.

ಜಿ.ಎಸ್.ಟಿ. ಅಡಿ ಸಣ್ಣ ವ್ಯಾಪಾರಿಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ. 1.5 ಕೋಟಿ ರೂ.ವರೆಗಿನ ವಹಿವಾಟುದಾರರಿಗೆ ಪ್ರತಿ 3 ತಿಂಗಳಿಗೊಮ್ಮೆ ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಇಂದಿನ ಜಿ.ಎಸ್.ಟಿ. ಮಂಡಳಿ ಸಭೆಗೆ ಪೂರ್ವಭಾವಿಯಾಗಿ ನಿನ್ನೆ ಪ್ರಧಾನಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಇಂದಿನ ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಜಿ.ಎಸ್.ಟಿ. ಜಾಲತಾಣದ ತಾಂತ್ರಿಕ ದೋಷ, 3 ತಿಂಗಳಿಗೊಮ್ಮೆ ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ಸೇರಿದಂತೆ ಹಲವು ವಿಚಾರಗಳು ಪ್ರಸ್ತಾಪವಾಗಲಿದ್ದು, ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...