alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಖುಷಿ ಸುದ್ದಿ ನೀಡ್ತಾರಾ ಪೆಟ್ರೋಲಿಯಂ ಸಚಿವ?

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಧ್ಯಮ ವರ್ಗದವರಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ. ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಸಂಜೆ ತೈಲ ಕಂಪನಿಗಳ ಅಧ್ಯಕ್ಷರ ಜೊತೆ ಸಭೆ ನಡೆಸಲಿದ್ದಾರೆ. ಪೆಟ್ರೋಲ್ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ದರು ಭಾರತದಲ್ಲಿ ಇಂಧನ ಬೆಲೆ ಹೆಚ್ಚಾಗುತ್ತಲೇ ಇದೆ. ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಮಂಗಳವಾರವೂ ಬೆಲೆ ಏರಿಕೆ ಮುಂದುವರೆದಿದೆ. ಕೆಲ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ ಏರಿಕೆಯಾಗಿದೆ.

ಪೆಟ್ರೋಲ್, ಡಿಸೇಲ್ ಮೇಲೆ ವಿಧಿಸಿರುವ ಶೇಕಡಾ 50 ಕ್ಕಿಂತಲೂ ಹೆಚ್ಚಿಗೆ ತೆರಿಗೆ, ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ಎಲ್ಲ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇಂದು ನಡೆಯುವ ಸಭೆ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ತೈಲ ಬೆಲೆ ಇಳಿಕೆ ಸಿಹಿ ಸುದ್ದಿಯನ್ನು ಸಚಿವರು ನೀಡಬಹುದು ಎಂಬ ಭರವಸೆಯಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...