alex Certify
ಕನ್ನಡ ದುನಿಯಾ       Mobile App
       

Kannada Duniya

ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದ ವಾಹನ ಸವಾರರಿಗೆ ಶಾಕ್

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 22 ಪೈಸೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 75.32 ಪೈಸೆಯಾದ್ರೆ, ಮಹಾನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 83 ರೂಪಾಯಿ ಆಗಿದೆ.

ಸತತ ನಾಲ್ಕು ದಿನಗಳಿಂದಲೂ ಪೆಟ್ರೋಲ್, ಡೀಸೆಲ್ ಬೆಲೆ ಏರುತ್ತಲೆ ಇದೆ. ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಹೆಚ್ಚಳವಾಗುವ ನಿರೀಕ್ಷೆಯಿದ್ದು, ಸಾರ್ವಕಾಲಿಕ ದಾಖಲೆಯಾಗಲಿದೆ. ಭಾರತದಲ್ಲಿ ಅತಿ ಹೆಚ್ಚು ಪೆಟ್ರೋಲ್ ಬೆಲೆ 2013 ಸೆಪ್ಟಂಬರ್ ನಲ್ಲಿ ಕಂಡು ಬಂದಿತ್ತು.

ಪಿ ಎಸ್ ಯು ಹೊಸ ಪರಿಷ್ಕರಣೆಯ ಪ್ರಕಾರ ಪೆಟ್ರೋಲ್ ದರ ದೆಹಲಿಯಲ್ಲಿ 75.32 ರೂ., ಮುಂಬೈನಲ್ಲಿ 83.16 ರೂ., ಕೋಲ್ಕತ್ತಾದಲ್ಲಿ 87.01 ರೂ., ಬೆಂಗಳೂರು ಮತ್ತು ಚೆನ್ನೈನಲ್ಲಿ 78.16 ರೂ. ಇದೆ. ಡೀಸೆಲ್ ಬೆಲೆ ದೆಹಲಿಯಲ್ಲಿ 66.79 ರೂ., ಕೋಲ್ಕತ್ತಾದಲ್ಲಿ 69.33 ರೂ., ಮುಂಬೈನಲ್ಲಿ 71.12 ರೂ. ಇದೆ. ಬೆಂಗಳೂರಿನಲ್ಲಿ 67.94 ರೂಪಾಯಿ ಇದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ವಾರಗಳವರೆಗೆ ಇಂಧನ ಬೆಲೆ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಾದ್ರೂ, ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24 ರಿಂದ ಮೇ 13 ರ ವರೆಗೂ ತೈಲ ಬೆಲೆಯನ್ನ ಹೆಚ್ಚಿಸಿರಲಿಲ್ಲ.

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...