alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! ಏರುತ್ತಲೇ ಇದೆ ಪೆಟ್ರೋಲ್ ಬೆಲೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರುತ್ತಿರುವ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗ್ತಿದೆ.

ಭಾನುವಾರವಷ್ಟೇ ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿತ್ತು. ಪೆಟ್ರೋಲ್ ಬೆಲೆ 4 ವರ್ಷಗಳಲ್ಲಿಯೇ ಗರಿಷ್ಠ ಮಟ್ಟ ತಲುಪಿತ್ತು. ಕಳೆದ 6 ದಿನಗಳಲ್ಲಿ ಪೆಟ್ರೋಲ್ ಬೆಲೆ 93 ಪೈಸೆಯಷ್ಟು ಹೆಚ್ಚಾಗಿದೆ.

ಹಿಂದೆ ಪ್ರತಿ 15 ದಿನಗಳಿಗೊಮ್ಮೆ ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕರಿಸುತ್ತಿದ್ದವು. ದೈನಂದಿನ ಬೆಲೆ ಪರಿಷ್ಕರಣೆ ಜಾರಿಗೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದರೂ, ಗ್ರಾಹಕರ ಅರಿವಿಗೆ ಬರುತ್ತಿಲ್ಲ.

ಪೆಟ್ರೋಲಿಯಂ ಸಚಿವಾಲಯ ಕೂಡ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತ ಮಾಡಬೇಕೆಂದು ಮನವಿ ಮಾಡಿತ್ತಾದರೂ, ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಲು ಕ್ರಮಕೈಗೊಂಡಿಲ್ಲ.

ಹಿಂದೆ 2 ರೂ. ಅಬಕಾರಿ ಸುಂಕ ಕಡಿತ ಮಾಡಿದ್ದ ಕೇಂದ್ರ, ವ್ಯಾಟ್ ಕಡಿತ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಕೆಲವೇ ಕೆಲವು ರಾಜ್ಯಗಳನ್ನು ಹೊರತುಪಡಿಸಿ, ಉಳಿದ ರಾಜ್ಯಗಳು ವ್ಯಾಟ್ ಕಡಿತ ಮಾಡದೇ ಕೇಂದ್ರವೇ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲು ಮುಂದಾಗಲಿ ಎಂದು ಒತ್ತಾಯಿಸಿವೆ.

ಈಗ ದಾಖಲೆಯ ಮಟ್ಟಕ್ಕೆ ತೈಲ ಬೆಲೆ ಏರಿಕೆಯಾಗಿರುವುದರಿಂದ ಮತ್ತೆ ಅಬಕಾರಿ ಸುಂಕವನ್ನು ಇಳಿಕೆ ಮಾಡಬೇಕೆಂಬ ಒತ್ತಡ ಕೇಳಿ ಬಂದಿದೆ. ಆದರೆ, ಅಬಕಾರಿ ಸುಂಕವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...