alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಹೆಚ್ಚಾಯ್ತು ಪೆಟ್ರೋಲ್, ಡೀಸೆಲ್ ಬೆಲೆ

ppp

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್ ಲೀಟರ್ ಗೆ 3.38 ರೂಪಾಯಿ ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಲೀಟರ್ ಗೆ 2.67 ರೂಪಾಯಿ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆ ಆಧರಿಸಿ, ಪ್ರತಿ 15 ದಿನಗಳಿಗೊಮ್ಮೆ ದೇಶೀಯ ಮಾರುಕಟ್ಟೆಯಲ್ಲಿಯೂ ತೈಲ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಕೆಯಾಗಿರುವುದರಿಂದ ಪೆಟ್ರೋಲ್ ಲೀ.ಗೆ 3.38 ರೂ. ಹಾಗೂ ಡೀಸೆಲ್ ಲೀ.ಗೆ 2.67 ರೂ. ಏರಿಕೆ ಮಾಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರಗಳು ಜಾರಿಗೆ ಬರಲಿವೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದಾಗಲೂ ಇಲ್ಲಿ ಪೈಸೆಗಳ ಲೆಕ್ಕದಲ್ಲಿ ಇಳಿಕೆ ಮಾಡಲಾಗುತ್ತದೆ. ಆದರೆ, ಬೆಲೆ ಏರಿಕೆ ಮಾಡುವಾಗ ಮಾತ್ರ ರೂಪಾಯಿಗಳ ಲೆಕ್ಕದಲ್ಲಿ ಇರುತ್ತದೆ ಎಂಬುದು ಗ್ರಾಹಕರ ದೂರಾಗಿದೆ. ಬೆಲೆ ಏರಿಕೆಯ ಬಿಸಿ ನಡುವೆ ತೈಲ ಬೆಲೆ ಭಾರೀ ಹೆಚ್ಚಾಗಿರುವುದು ನುಂಗಲಾರದ ತುತ್ತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...