alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ವಾಹನ ಸವಾರರಿಗೆ ‘ಶಾಕ್’ ನೀಡ್ತಿದೆ ಪೆಟ್ರೋಲ್-ಡಿಸೇಲ್ ಬೆಲೆ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ ಮುಖ ಕಂಡಿದೆ. ಸತತ ಎರಡು ದಿನಗಳಿಂದ ಪೆಟ್ರೋಲ್-ಡೀಸೆಲ್  ಬೆಲೆಯಲ್ಲಿ ಹೆಚ್ಚಳವಾಗ್ತಿದೆ. ಶುಕ್ರವಾರ ಪೆಟ್ರೋಲ್ ಬೆಲೆ 19 ಪೈಸೆ ಹಾಗೂ ಡೀಸೆಲ್ ಬೆಲೆ 28 ಪೈಸೆ ಹೆಚ್ಚಳವಾಗಿದೆ. ಮತ್ತೆ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 69 ರೂಪಾಯಿಗೆ ಬಂದು ನಿಂತಿದೆ. ಶುಕ್ರವಾರ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 69.07 ರೂಪಾಯಿಯಾದ್ರೆ, ಡೀಸೆಲ್ ಬೆಲೆ ಲೀಟರ್ ಗೆ 62.81 ರೂಪಾಯಿಯಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಪೆಟ್ರೋಲ್ 20 ಪೈಸೆ ಹೆಚ್ಚಳ ಕಂಡು ಲೀಟರ್ ಗೆ 71 ರೂಪಾಯಿ 34 ಪೈಸೆಯಾಗಿದೆ. ಇನ್ನು ಡೀಸೆಲ್ ಬೆಲೆ 29 ಪೈಸೆ ಹೆಚ್ಚಳ ಕಂಡು ಲೀಟರ್ ಗೆ 64 ರೂಪಾಯಿ 87 ಪೈಸೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ನಿರಂತರವಾಗಿ  ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆ ಸದ್ಯ 60 ಡಾಲರ್ ಆಸುಪಾಸಾಗಿದೆ. ಕಚ್ಚಾ ತೈಲ ಉತ್ಪನ್ನದಲ್ಲಿ ಇಳಿಕೆ ಮಾಡಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. ಕಚ್ಚಾ ತೈಲ ಬೆಲೆಯಲ್ಲಿ ಹೆಚ್ಚಳ ಮುಂದುವರೆದ್ರೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಕೂಡ ಹೆಚ್ಚಳವಾಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...