alex Certify
ಕನ್ನಡ ದುನಿಯಾ       Mobile App
       

Kannada Duniya

ಸತತ ಹತ್ತನೇ ದಿನವೂ ಇಳಿಕೆಯಾಯ್ತು ಪೆಟ್ರೋಲ್-ಡೀಸೆಲ್ ಬೆಲೆ

ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಪ್ರತಿನಿತ್ಯ ಏರಿಕೆ ಕಾಣುವ ಮೂಲಕ ಗ್ರಾಹಕರಲ್ಲಿ ಆತಂಕ ಹುಟ್ಟಿಸಿದ್ದ ಪೆಟ್ರೋಲ್- ಡೀಸೆಲ್ ಬೆಲೆ, ಕಳೆದ 9 ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ್ದು, 10 ನೇ ದಿನವಾದ ಇಂದು ಕೂಡಾ ದರ ಮತ್ತಷ್ಟು ಕಡಿಮೆಯಾಗಿದೆ.

ಇಂದು ಪೆಟ್ರೋಲ್ ಬೆಲೆಯಲ್ಲಿ 21 ಪೈಸೆ ಕಡಿಮೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 15 ಪೈಸೆಯಷ್ಟು ಇಳಿಕೆಯಾಗಿದೆ. ದೆಹಲಿಯಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರ್ ಗೆ 77.42 ರೂ. ಗಳಾಗಿದ್ದು, ಡೀಸೆಲ್ ದರ 68.58 ರೂ. ತಲುಪಿದೆ.

ತೈಲ ದರವನ್ನು ಜಿ ಎಸ್ ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಒಂದು ವೇಳೆ ಇದು ಕಾರ್ಯರೂಪಕ್ಕೆ ಬಂದರೆ ಪೆಟ್ರೋಲ್-ಡೀಸೆಲ್ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...