alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

At the Gas Station

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದೇ ಕಷ್ಟ ಸಾಧ್ಯ. ಇಂತಹ ಸಂದರ್ಭದಲ್ಲಿ ಬಡ, ಮಧ್ಯಮ ವರ್ಗದವರಿಗೆ ಕೊಂಚ ನೆಮ್ಮದಿ ನೀಡುವ ಸಿಹಿ ಸುದ್ದಿಯೊಂದು ಇಲ್ಲಿದೆ.

ಕಳೆದ ಜುಲೈನಿಂದಲೂ ಇಳಿಕೆಯಾಗುತ್ತಲೇ ಸಾಗಿರುವ ತೈಲ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿಯೂ ತೈಲ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ತೈಲ ಕಂಪನಿಗಳು, ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್ ಲೀಟರ್ ಗೆ 1 ರೂಪಾಯಿ ಹಾಗೂ ಡೀಸೆಲ್ ಲೀಟರ್ ಗೆ 2 ರೂಪಾಯಿ ಇಳಿಕೆ ಆಗಿದೆ.

ನಿನ್ನೆ ಮಧ್ಯರಾತ್ರಿಯಿಂದಲೇ ನೂತನ ದರಗಳು ಜಾರಿಗೆ ಬಂದಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಕೆ ಆಗಿರುವ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆಯನ್ನು ಪರಿಷ್ಕರಿಸಲಾಗಿದೆ. ಪೆಟ್ರೋಲ್ 1 ರೂ., ಡೀಸೆಲ್ 2 ರೂ. ಕಡಿಮೆಯಾಗಿದೆ. ಕಳೆದ ಜುಲೈನಿಂದ ಇದುವರೆಗೆ 4 ಬಾರಿ ತೈಲ ಬೆಲೆ ಇಳಿಕೆ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...