alex Certify
ಕನ್ನಡ ದುನಿಯಾ       Mobile App
       

Kannada Duniya

ಇಳಿಕೆಯಾಗುತ್ತಾ ಪೆಟ್ರೋಲ್ ಬೆಲೆ..?

ಬೆಂಗಳೂರು: ಕಳೆದ ಜುಲೈ ತಿಂಗಳಿಂದ ದೇಶದಲ್ಲಿ ತೈಲ ಬೆಲೆ ದೈನಂದಿನ ಪರಿಷ್ಕರಣೆ ಜಾರಿಗೆ ಬಂದಾಗಿನಿಂದ ತೈಲ ಬೆಲೆಯಲ್ಲಿ ಏರಿಕೆಯಾಗಿದೆ.

ಮುಂಬೈ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80 ರೂ. ತಲುಪಿದೆ. ತೈಲ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯ ಏರಿಳಿತ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆಯನ್ನು ಪರಿಷ್ಕರಿಸುತ್ತವೆ.

ಈ ಮೊದಲು ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಿಸಲಾಗುತ್ತಿತ್ತು. ಜುಲೈನಿಂದ ದೈನಂದಿನ ಬೆಲೆ ಪರಿಷ್ಕರಣೆ ಜಾರಿಗೆ ಬಂದಿದೆ. ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತಂದರೆ ಬೆಲೆಯಲ್ಲಿ ಕಡಿಮೆಯಾಗಲಿದೆ.

ದೈನಂದಿನ ಬೆಲೆ ಪರಿಷ್ಕರಣೆ ಜಾರಿಯಾದಾಗಿನಿಂದ ಲೀಟರ್ ಪೆಟ್ರೋಲ್ ಬೆಲೆ 7 ರೂ. ಗೂ ಅಧಿಕ ಏರಿಕೆಯಾಗಿದೆ. ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಜಿ.ಎಸ್.ಟಿ. ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತಂದಲ್ಲಿ ಬೆಲೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ 2014 ರ ನವೆಂಬರ್ ನಿಂದ 2016 ರ ಜನವರಿವರೆಗೆ 9 ಸಲ ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಿ.ಎಸ್.ಟಿ. ಅನ್ವಯಿಸಿದರೆ ಬೆಲೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...