alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ನಲ್ಲಿ ತೆರಿಗೆ ಹೊರೆ ಕಡಿಮೆ ಮಾಡ್ತಾರಾ ಮೋದಿ?

ಫೆಬ್ರವರಿ 1ರಂದು 2018-19ನೇ ಸಾಲಿನ ಕೇಂದ್ರ ಹಣಕಾಸು ಬಜೆಟ್ ಮಂಡನೆಯಾಗಲಿದೆ. ಇದು ಮೋದಿ ಸರ್ಕಾರದ ಕೊನೆಯ ಬಜೆಟ್. ಹಾಗಾಗಿ ಜನರ ತೆರಿಗೆ ಭಾರವನ್ನು ಪ್ರಧಾನಿ ಮೋದಿ ಕಡಿಮೆ ಮಾಡಲಿದ್ದಾರೆ ಅನ್ನೋ ನಿರೀಕ್ಷೆ ಎಲ್ಲರಲ್ಲೂ ಇದೆ.

ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಮುಂದಾಗಿದ್ದಾರೆ ಅನ್ನೋ ಮಾತುಗಳು ಕೂಡ ಕೇಳಿ ಬರುತ್ತಿವೆ. ಈಗಾಗ್ಲೇ 2018-19ನೇ ಸಾಲಿನ ಆಯವ್ಯಯಕ್ಕಾಗಿ ಕೇಂದ್ರ ಸರ್ಕಾರ ತಯಾರಿಯನ್ನು ಕೂಡ ಆರಂಭಿಸಿದೆ.

2019ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅದನ್ನು ಗಮನದಲ್ಲಿರಿಸಿಕೊಂಡೇ ಮೋದಿ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಕೂಡ ಬಜೆಟ್ ನಲ್ಲಿ ಜೇಟ್ಲಿ ಹೆಚ್ಚು ಒತ್ತು ನೀಡುವ ನಿರೀಕ್ಷೆ ಇದೆ. ನೇರ ಮತ್ತು ಪರೋಕ್ಷ ತೆರಿಗೆ ಇಳಿಕೆ ಕೇಂದ್ರದ ಮುಂದಿರುವ ಬಹುದೊಡ್ಡ ಸವಾಲು.

ಹಾಗಾಗಿ ಜಿಎಸ್ಟಿ ದರದಲ್ಲೂ ಬದಲಾವಣೆ ಮಾಡಲು ಜೇಟ್ಲಿ ಚಿಂತನೆ ನಡೆಸಿದ್ದಾರೆ. ಶೇ.12 ರಿಂದ ಶೇ.18ರಷ್ಟು ಜಿಎಸ್ಟಿ ಇರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವ ಸಾಧ್ಯತೆ ಇದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಜಿಎಸ್ಟಿ ದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.

ಕಾರ್ಪೊರೇಟ್ ತೆರಿಗೆಯಲ್ಲೂ ಬದಲಾವಣೆ ನಿರೀಕ್ಷಿಸಬಹುದು. ಆದಾಯ ತೆರಿಗೆ ಪ್ರಮಾಣವನ್ನೂ ಕೊಂಚ ಇಳಿಕೆ ಮಾಡುವ ಸಾಧ್ಯತೆ ಇದೆ. ಸದ್ಯ 2.5-5 ಲಕ್ಷ ಆದಾಯ ಹೊಂದಿರುವವರಿಗೆ ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತದೆ. 5-10 ಲಕ್ಷ ರೂ. ಆದಾಯ ಹೊಂದಿರುವವರಿಗೆ ಶೇ.20 ಹಾಗೂ 10 ಲಕ್ಷಕ್ಕಿಂತ ಅಧಿಕ ಆದಾಯ ಹೊಂದಿರುವವರು ಶೇ.30ರಷ್ಟು ತೆರಿಗೆ ಪಾವತಿಸಬೇಕಿದೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...