alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಮುಗಿದ ಬೆನ್ನಲ್ಲೇ ‘ಕರೆಂಟ್’ ಶಾಕ್!

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆದಿದೆ. ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇಂದು ವಿದ್ಯುತ್ ದರ ಏರಿಕೆ ಸಂಬಂಧ ನಿರ್ಧಾರವನ್ನು ಪ್ರಕಟಿಸಲಿದೆ.

ಯೂನಿಟ್ ಗೆ ಸರಾಸರಿ 50 ಪೈಸೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಏಪ್ರಿಲ್ ಮೊದಲ ವಾರದಲ್ಲೇ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿತ್ತಾದರೂ, ವಿಧಾನಸಭೆ ಚುನಾವಣೆ ಕಾರಣದಿಂದ ವಿದ್ಯುತ್ ದರ ಏರಿಕೆ ಪ್ರಕ್ರಿಯೆ ಮುಂದೂಡಲಾಗಿತ್ತು.

ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿರುವುದರಿಂದ ಇಂದು ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಬೆಲೆ ಏರಿಕೆ ಕುರಿತು ತೀರ್ಮಾನವನ್ನು ಕೈಗೊಳ್ಳಲಿದೆ. ಎಸ್ಕಾಂಗಳು ಪ್ರತಿ ಯೂನಿಟ್ ಗೆ 83 ಪೈಸೆಯಿಂದ 1.50 ರೂ. ವರೆಗೆ ದರ ಏರಿಕೆ ಮಾಡಬೇಕೆಂದು ಬೇಡಿಕೆ ಇಟ್ಟಿವೆ. ಆಯೋಗ ಪ್ರತಿ ಯೂನಿಟ್ ಗೆ 50 ಪೈಸೆ ಏರಿಕೆ ಮಾಡಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...