alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್!

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಂಧನ ಬೆಲೆ ಇನ್ನೂ ದುಬಾರಿಯಾಗಲಿದ್ದು, ಭಾರತದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ನಿರೀಕ್ಷೆ ಇದೆ.

ಕಚ್ಚಾ ತೈಲದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಿದೆ. ಇದರೊಂದಿಗೆ ನೈಸರ್ಗಿಕ ಅನಿಲ, ಕಲ್ಲಿದ್ದಲು ಬೆಲೆ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ.

ಭಾರತದಲ್ಲಿ ಕಚ್ಚಾ ತೈಲ ಬಳಕೆಯಲ್ಲಿ ಶೇ. 11 ರಷ್ಟು ಹೆಚ್ಚಳವಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್ ಗೆ ಸರಾಸರಿ 65 ಡಾಲರ್ ಗೆ ಏರಿಕೆಯಾಗಲಿದೆ. ಕಚ್ಚಾತೈಲ, ನೈಸರ್ಗಿಕ ಅನಿಲ, ಕಲ್ಲಿದ್ದಲು ಬೆಲೆ ಶೇ. 20 ರಷ್ಟು ಏರಿಕೆಯಾಗಲಿದೆ.

ಜಾಗತಿಕ ಬೆಳವಣಿಗೆ ಪ್ರಭಾವ, ಬೇಡಿಕೆ ಹೆಚ್ಚಳದ ಕಾರಣದಿಂದ ವಿವಿಧ ಸರಕುಗಳ ಬೆಲೆ ಏರಿಕೆಯಾಗಲಿದೆ. ಕೃಷಿ ಉತ್ಪನ್ನಗಳು ಶೇ. 2 ರಷ್ಟು ಏರಿಕೆಯಾಗಲಿವೆ ಎಂದು ವಿಶ್ವಬ್ಯಾಂಕ್ ಹಿರಿಯ ನಿರ್ದೇಶಕ ಎಸ್. ದೇವರಾಜನ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...