alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಸಚಿವ

ಬೆಂಗಳೂರು: ಕೇರಳದಲ್ಲಿ ಕೂಲಿಕಾರ್ಮಿಕನ ಪುತ್ರ ರೈಲ್ವೇ ನಿಲ್ದಾಣದ ಉಚಿತ ವೈಫೈ ಸೇವೆಯ ಮೂಲಕ ಜಾಲತಾಣದಲ್ಲಿ ಮಾಹಿತಿ ಪಡೆದು ನಾಗರಿಕ ಸೇವಾ ಪರೀಕ್ಷೆಯಲ್ಲಿ ಪಾಸಾಗಿದ್ದು ಭಾರೀ ಸುದ್ದಿಯಾಗಿತ್ತು.

ಇದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವ ರೈಲ್ವೇ ಸಚಿವ ಪಿಯೂಷ್ ಗೋಯಲ್, ಎಲ್ಲಾ ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯವನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಮಹಾಸಂಸ್ಥೆಯಲ್ಲಿ ಏರ್ಪಡಿಸಿದ್ದ ಕೈಗಾರಿಕೋದ್ಯಮಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಕೇರಳದ ಕಾರ್ಮಿಕನ ಪುತ್ರ ರೈಲು ನಿಲ್ದಾಣದ ಉಚಿತ ವೈಫೈ ಸೌಲಭ್ಯವನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ. ರೈಲುಗಳಲ್ಲಿ ಬಹುತೇಕ ಬಡ, ಮಧ್ಯಮ ವರ್ಗದವರು ಪ್ರಯಾಣಿಸುತ್ತಾರೆ. ಇಂಟರ್ ನೆಟ್ ಸೌಲಭ್ಯ ಎಲ್ಲರಿಗೂ ತಲುಪಬೇಕಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಅನೇಕ ರೈಲು ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಮುಂದಿನ 1 ವರ್ಷದಲ್ಲಿ ದೇಶಾದ್ಯಂತ 7,000 ರೈಲು ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...