alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಇತ್ತೀಚೆಗಷ್ಟೇ 90 ಸಾವಿರಕ್ಕೂ ಅಧಿಕ  ಉದ್ಯೋಗಗಳಿಗೆ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಿದ್ದ ರೈಲ್ವೇ ಇಲಾಖೆ, ಈಗ ಮತ್ತೊಂದು ಸುತ್ತಿನ ನೇಮಕಾತಿಗೆ ಮುಂದಾಗಿದೆ.

ಸುಮಾರು ಒಂಬತ್ತು ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸಬ್ ಇನ್ಸ್ಪೆಕ್ಟರ್ ಹಾಗೂ ಪೇದೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳಿಂದ ರೈಲ್ವೆ ಇಲಾಖೆ, ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ರೈಲ್ವೆ ಸುರಕ್ಷಾ ದಳಕ್ಕೆ ಈ ನೇಮಕಾತಿ ನಡೆಯುತ್ತಿದ್ದು, 8619 ಕಾನ್ಸ್ಟೇಬಲ್  ಹುದ್ದೆಗಳ ಪೈಕಿ 4403 ಪುರುಷರು ಹಾಗೂ 4216 ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಹಾಗೆಯೇ 1120 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಈ ಪೈಕಿ 819 ಮಂದಿ ಪುರುಷರು ಹಾಗೂ 301 ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...