alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಬಂದ್’ ಗೂ ಮುನ್ನವೇ ಇಲ್ಲಿ ಇಳಿಕೆಯಾಯ್ತು ಪೆಟ್ರೋಲ್-ಡೀಸೆಲ್ ಬೆಲೆ…!

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಿಯಂತ್ರಿಸುವ ಮೂಲಕ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್, ನಾಳೆ ‘ಭಾರತ್ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ಕೇಂದ್ರ ಸರ್ಕಾರಕ್ಕೂ ತಲೆಬಿಸಿಯನ್ನುಂಟು ಮಾಡಿದ್ದು, ಆದರೆ ಅದರ ನಿಯಂತ್ರಣಕ್ಕೆ ಪರ್ಯಾಯ ಮಾರ್ಗವಿಲ್ಲದ ಕಾರಣ ಅನಿವಾರ್ಯವಾಗಿ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ.

ಇದರ ಮಧ್ಯೆ ಬಿಜೆಪಿ ಆಳ್ವಿಕೆಯ ರಾಜಸ್ಥಾನದಲ್ಲಿ ತೈಲ ದರದ ಮೇಲಿನ ವ್ಯಾಟ್ ಅನ್ನು ಶೇಕಡಾ 4 ರಷ್ಟು ಇಳಿಕೆ ಮಾಡಿದ್ದು, ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2.5 ರೂ.ಗಳಷ್ಟು ಕಡಿಮೆಯಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವದರ ಮಧ್ಯೆ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧ್ಯಾ, ಇಂದು ಈ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...