alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳು ಸಿನಿಮಾ ಪರ ನಿಂತ ರಜನಿಕಾಂತ್

rajnikanth

ತಮಿಳುನಾಡು ಚಿತ್ರಮಂದಿರಗಳು ಬಾಗಿಲು ಮುಚ್ಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ಜಿ ಎಸ್ ಟಿ ಜೊತೆ ಶೇಕಡಾ 30ರಷ್ಟು ಹೆಚ್ಚುವರಿಯಾಗಿ ವಿಧಿಸಿರುವ ಸ್ಥಳೀಯ ತೆರಿಗೆಯನ್ನು ತೆಗೆದು ಹಾಕುವಂತೆ ರಜನಿಕಾಂತ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿದ ರಜನಿಕಾಂತ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ಚಲನಚಿತ್ರೋದ್ಯಮ ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಮಿಳುನಾಡು ಸರ್ಕಾರಕ್ಕೆ ವಿನಂತಿ ಮಾಡುತ್ತೇನೆಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

ಜುಲೈ ಒಂದರಿಂದ ದೇಶದಾದ್ಯಂತ ಜಿ ಎಸ್ ಟಿ ಜಾರಿಯಾಗಿದೆ. ಇದ್ರ ಜೊತೆಗೆ ಹೆಚ್ಚುವರಿಯಾಗಿ ಶೇಕಡಾ 30ರಷ್ಟು ತೆರಿಗೆಯನ್ನು ತಮಿಳು ಥಿಯೇಟರ್ ಮಾಲೀಕರು ನೀಡಬೇಕಾಗಿದೆ. ಹಾಗಾಗಿ ಇದನ್ನು ವಿರೋಧಿಸಿ 1100ಕ್ಕೂ ಹೆಚ್ಚು ಚಿತ್ರಮಂದಿರಗಳು ಬಾಗಿಲು ಮುಚ್ಚಿವೆ. ಸರ್ಕಾರದ ಈ ನಿರ್ಧಾರವನ್ನು ಮಂಗಳವಾರ ನಟ ಕಮಲ್ ಹಾಸನ್ ಕೂಡ ವಿರೋಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...