alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಆರ್.ಬಿ.ಐ. ನೀಡುತ್ತಾ ಗುಡ್ ನ್ಯೂಸ್…?

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ನಿಂದ ಇಂದು ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಆರ್.ಬಿ.ಐ. ಗವರ್ನರ್ ಊರ್ಜಿತ್ ಪಟೇಲ್ ನೇತೃತ್ವದಲ್ಲಿ ಆರ್ಥಿಕ ಪರಾಮರ್ಶೆ ಸಭೆ ನಡೆಯಲಿದ್ದು, ಬಡ್ಡಿದರ(ರೆಪೊ)ಕ್ಕೆ ಸಂಬಂಧಿಸಿದಂತೆ ಪ್ರಮುಖ ತೀರ್ಮಾನ ಕೈಗೊಳ್ಳಲಾಗುವುದು.

ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂಬುದು ಆರ್ಥಿಕ ತಜ್ಞರ ಅಭಿಪ್ರಾಯವಾಗಿದೆ. ಜಿ.ಡಿ.ಪಿ. ಬೆಳವಣಿಗೆ ಕಂಡಿದ್ದರೂ, ಅಕ್ಟೋಬರ್ ನಲ್ಲಿ ಸಗಟು ಹಣದುಬ್ಬರ ಶೇ. 3.59 ರಷ್ಟಿದೆ.

ಇದು ಕಳೆದ 6 ತಿಂಗಳ ಅವಧಿಯಲ್ಲಿಯೇ ಗರಿಷ್ಠ ಮಟ್ಟವಾಗಿದ್ದು, ಮುಂದಿನ ತಿಂಗಳಲ್ಲಿ ಹಣದುಬ್ಬರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಕೂಡ ಇದೆ. ಈ ಕಾರಣಗಳಿಂದ ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಆರ್.ಬಿ.ಐ. ಆರ್ಥಿಕ ಪರಾಮರ್ಶೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...