alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಕೆಲಸ ಬಯಸುವವರಿಗೆ ಇಲ್ಲಿದೆ ಸಿಹಿ ಸುದ್ದಿ

ನವದೆಹಲಿ: 10 ನೇ ತರಗತಿಯಿಂದ ಹಿಡಿದು ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸರ್ಕಾರಿ ಕೆಲಸಕ್ಕೆ ಸೇರಲು ಅತ್ಯುತ್ತಮ ಅವಕಾಶವನ್ನು ರೈಲ್ವೇ ಇಲಾಖೆ ನೀಡಿದೆ.

ರೈಲ್ವೇ ಇಲಾಖೆಯಿಂದ ಬರೋಬ್ಬರಿ 91,307 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 10 ನೇ ತರಗತಿ ಪಾಸಾದವರು, ಡಿಪ್ಲೊಮಾ, ಐ.ಟಿ.ಐ. ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪದವಿ ಇಲ್ಲದವರಿಗೂ ಹೆಚ್ಚಿನ ಉದ್ಯೋಗಾವಕಾಶ ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ತಿಂಗಳಿಗೆ 18,000 ರೂ. ವೇತನ ಶ್ರೇಣಿಯ 62,907 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸಬೇಕಿದೆ.

ಇದರೊಂದಿಗೆ ಒಟ್ಟು 26,502 ಎ.ಎಲ್.ಪಿ. ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 28 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮಾರ್ಚ್ 5 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪೂರ್ವ ಕೇಂದ್ರೀಯ ರೈಲ್ವೇಯಲ್ಲಿ 1898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಫೆಬ್ರವರಿ 28 ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 10 ನೇ ತರಗತಿಯಲ್ಲಿ ಶೇ. 50 ರಷ್ಟು ಅಂಕ ಪಡೆದ ಐ.ಟಿ.ಐ. ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...