alex Certify
ಕನ್ನಡ ದುನಿಯಾ       Mobile App
       

Kannada Duniya

ನಿವೃತ್ತಿ ವೇತನ: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ನಿವೃತ್ತಿ ವೇತನ ಸೌಲಭ್ಯದ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಸಿಬ್ಬಂದಿಗೆ ನೀಡಲಾಗುತ್ತಿರುವ ನಿವೃತ್ತಿ ಸೌಲಭ್ಯವನ್ನು ಗ್ರಾಮೀಣ ಬ್ಯಾಂಕ್ ಗಳ ಸಿಬ್ಬಂದಿಗೂ ನೀಡಬೇಕೆಂದು ಸೂಚಿಸಿದೆ.

ದೇಶಾದ್ಯಂತ ಸುಮಾರು 56 ಗ್ರಾಮೀಣ ಬ್ಯಾಂಕ್ ಗಳು ಇದ್ದು, 1 ಲಕ್ಷ ಸಿಬ್ಬಂದಿ ಇದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಇವರಿಗೆಲ್ಲಾ ನಿವೃತ್ತಿ ವೇತನ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗೆ ನೀಡುತ್ತಿರುವಂತೆ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗೂ ಪಿಂಚಣಿ ನೀಡಬೇಕೆಂದು ಗ್ರಾಮೀಣ ಬ್ಯಾಂಕ್ ಪಿಂಚಣಿದಾರರ ಸಮಿತಿ ಕರ್ನಾಟಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, 2011 ರಲ್ಲಿ ಪಿಂಚಣಿ ಸಮಾನತೆ ಕಾಯ್ದುಕೊಳ್ಳುವಂತೆ ಹೈಕೋರ್ಟ್ ತಿಳಿಸಿತ್ತು.

1990 ರಲ್ಲಿ ರಾಷ್ಟ್ರೀಯ ಕೈಗಾರಿಕಾ ನ್ಯಾಯ ಮಂಡಳಿ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗೆ ಎಲ್ಲಾ ಯೋಜನೆ ನೀಡಲು ಆದೇಶ ನೀಡಿದೆ.

2012 ರಲ್ಲಿ ರಾಜಸ್ತಾನ ಹೈಕೋರ್ಟ್ ಈ ಕುರಿತು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಕುರಿಯನ್ ಜೋಸೆಫ್ ನೇತೃತ್ವದ ವಿಭಾಗೀಯ ಪೀಠ, 3 ತಿಂಗಳೊಳಗೆ ಗ್ರಾಮೀಣ ಬ್ಯಾಂಕ್ ನೌಕರರಿಗೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...