alex Certify
ಕನ್ನಡ ದುನಿಯಾ       Mobile App
       

Kannada Duniya

ವೆಂಕಟೇಶ್ವರನಿಗೆ 1.1 ಕೋಟಿ ರೂ. ದೇಣಿಗೆ ನೀಡಿದ ಮುಕೇಶ್ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ತಿರುಪತಿ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಸೋಮವಾರ ದೊಡ್ಡ ಮೊತ್ತದ ದೇಣಿಗೆ ನೀಡಿದೆ. ಮುಕೇಶ್ ಅಂಬಾನಿ ಸ್ವಾಮ್ಯದ ಕಂಪನಿ ಆರ್ಐಎಲ್ 1.1 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್ ಈ ಹಣವನ್ನು ಬಳಸಲಿದೆ ಎಂದು ಕಂಪನಿ ಹೇಳಿದೆ.

ಕಂಪನಿಯ ಅಧಿಕಾರಿಯೊಬ್ಬರು ದೇವಸ್ಥಾನದ ಅಧಿಕಾರಿಗೆ 1.1 ಕೋಟಿ ರೂಪಾಯಿ ಮೌಲ್ಯದ ಡಿಮಾಂಡ್ ಡ್ರಾಫ್ಟ್ ನೀಡಿದ್ದಾರೆ. ಪ್ರಾಣದಾನ ಟ್ರಸ್ಟ್ 2001 ರಲ್ಲಿ ಶುರುವಾಗಿದೆ. ದೇವಸ್ಥಾನ ಪ್ರಾಣದಾನ ಹೆಸರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಡೆಸುತ್ತಿದೆ. ಮಾರಣಾಂತಿಕ ಕಾಯಿಲೆಯಿಂದ ಬಳಲುವವರಿಗೆ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ.

ಆರ್ಐಎಲ್ ನೀಡಿರುವ 1.1 ಕೋಟಿ ರೂಪಾಯಿಯನ್ನು ಟ್ರಸ್ಟ್ ಈ ಆಸ್ಪತ್ರೆಗೆ ಬಳಸಲಿದೆ. ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಬಳಸಿಕೊಳ್ಳಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...