alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಶೀಘ್ರದಲ್ಲೇ ಕಾದಿದೆ ದೊಡ್ಡ ಶಾಕ್

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾರತದಲ್ಲೂ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಇದರಿಂದ ವಾಹನ ಸವಾರರು ಈಗಾಗಲೇ ಹೈರಾಣಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಒತ್ತಡದ ಕಾರಣಕ್ಕೆ ಭಾರತದ ತೈಲ ಕಂಪನಿಗಳು, ಸತತ 19 ದಿನಗಳ ಕಾಲ ಪೆಟ್ರೋಲ್-ಡಿಸೇಲ್ ಬೆಲೆಯನ್ನು ಪರಿಷ್ಕರಿಸಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಪ್ರಕಟಗೊಂಡ ಬಳಿಕ ಕಳೆದ ಐದು ದಿನಗಳಿಂದ ಪ್ರತಿನಿತ್ಯ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯತ್ತ ಸಾಗಿದೆ.

ಇದೇ ರೀತಿ ಬೆಲೆ ಏರಿಕೆಯಾಗುತ್ತಾ ಹೋದರೆ ಪೆಟ್ರೋಲ್-ಹಾಗೂ ಡಿಸೇಲ್ ಬೆಲೆ ದಾಖಲೆ ಮಟ್ಟಕ್ಕೆ ಮುಟ್ಟಲಿದೆ ಎನ್ನಲಾಗಿದೆ. ಈ ಮಧ್ಯೆ ಮಾರುಕಟ್ಟೆ ತಜ್ಞರ ಹೇಳಿಕೆ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ 19 ದಿನಗಳ ಕಾಲ ತೈಲ ಕಂಪನಿಗಳು ಬೆಲೆ ಪರಿಷ್ಕರಿಸದ ಕಾರಣ ತೀವ್ರ ನಷ್ಟದಲ್ಲಿವೆ. ಅದನ್ನು ಸರಿದೂಗಿಸಲು ಪೆಟ್ರೋಲ್-ಡಿಸೇಲ್ ಬೆಲೆ ಶೀಘ್ರದಲ್ಲೇ ಲೀಟರ್ ಗೆ 4 ರೂ. ಗಳಷ್ಟು ಹೆಚ್ಚಳವಾದರೂ ಅಚ್ಚರಿಯಿಲ್ಲವೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...