alex Certify
ಕನ್ನಡ ದುನಿಯಾ       Mobile App
       

Kannada Duniya

ರೂಪಾಯಿ ಮೌಲ್ಯ ಕುಸಿತದ ಕುರಿತು ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ರೂಪಾಯಿ ಮೌಲ್ಯವು ಡಾಲರ್ ಎದುರಿಗೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈಗ 70 ರೂಪಾಯಿಯನ್ನು ದಾಟಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ವಾಣಿಜ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಗರ್ಗ್, ರೂಪಾಯಿ ಮೌಲ್ಯ ಕುಸಿತಕ್ಕೆ ಹೊರ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳೇ ಕಾರಣ. ಈ ಕುರಿತು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್.ಬಿ.ಐ. ಬ್ಯಾಂಕಿನ ಮುಖ್ಯಸ್ಥ ರಜನೀಶ್ ಕುಮಾರ್, ಬೇರೆ ದೇಶದ ಕರೆನ್ಸಿಗೆ ಹೋಲಿಸಿದರೆ ಡಾಲರ್ ಎದುರು ಭಾರತದ ರೂಪಾಯಿ ಗಟ್ಟಿಮುಟ್ಟಾಗಿದೆ ಎಂದು ತಿಳಿಸಿದ್ದಾರೆ.

ಟರ್ಕಿ ದೇಶದಲ್ಲಿ ನಡೆಯುತ್ತಿರುವ ಆರ್ಥಿಕ ಬಿಕ್ಕಟ್ಟು ಹಾಗೂ ಡಾಲರ್ ನ ಸೂಚ್ಯಂಕ ಏರಿಕೆಯಿಂದಾಗಿ ಭಾರತದ ರೂಪಾಯಿ ಮೌಲ್ಯದಲ್ಲಿ ಕುಸಿತ ಉಂಟಾಗುತ್ತಿದೆ. ಸ್ವಲ್ಪ ದಿನದ ನಂತರ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...