alex Certify
ಕನ್ನಡ ದುನಿಯಾ       Mobile App
       

Kannada Duniya

ಫೆಬ್ರವರಿಯಲ್ಲಿ ಮಂಡನೆಯಾಗಲಿದೆ ರಾಜ್ಯ ಬಜೆಟ್

ರಾಜ್ಯ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು, ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಜನವರಿ ತಿಂಗಳಿನಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಜೆಪಿ ಅತ್ಯಂತ ದುರ್ಬಲವಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯವರಿಗೆ ಅಭ್ಯರ್ಥಿಗಳ ಕೊರತೆಯಿದೆ ಎಂದು ಲೇವಡಿ ಮಾಡಿದರಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕುವ ಸಾಮರ್ಥ್ಯವಿದೆ ಎಂದರು.

ಬಿಜೆಪಿ ನಡೆಸುತ್ತಿರುವ ಪರಿವರ್ತನಾ ಯಾತ್ರೆ ಕುರಿತು ವ್ಯಂಗ್ಯವಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿವರ್ತನಾ ಯಾತ್ರೆಗೆ ಜನರೇ ಸೇರುತ್ತಿಲ್ಲ. ಈ ಯಾತ್ರೆ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...