alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಹೊಸ ಬಜೆಟ್ ಮಂಡಿಸಬೇಕೋ ಅಥವಾ ಪೂರಕ ಬಜೆಟ್ ಸಾಕೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಹೊಸ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಜ್ಜಾಗಿದ್ದಾರೆ.

ಜುಲೈ 5 ರಂದು ದೋಸ್ತಿ ಸರ್ಕಾರದ ಹೊಸ ಬಜೆಟ್ ಮಂಡನೆ ಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗುರುವಾರದಂದು ಬಜೆಟ್ ಮಂಡನೆ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.

ಹೊಸ ಬಜೆಟ್ ನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಜೆಡಿಎಸ್, ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ರೈತರ ಸಾಲ ಮನ್ನಾ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರಕ ಬಜೆಟ್ ಮಂಡಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೊಸ ಬಜೆಟ್ ಮಂಡನೆಗೆ ಒಲವು ಹೊಂದಿದ್ದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕುಮಾರಸ್ವಾಮಿಯವರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದು, ಜುಲೈ 5 ರಂದು ಹೊಸ ಬಜೆಟ್ ಮಂಡನೆಯಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...