alex Certify
ಕನ್ನಡ ದುನಿಯಾ       Mobile App
       

Kannada Duniya

ಸಣ್ಣ ಉಳಿತಾಯ ಖಾತೆದಾರರಿಗೆ ಇಲ್ಲಿದೆ ಶುಭ ಸುದ್ದಿ

ನವದೆಹಲಿ: ಸಣ್ಣ ಉಳಿತಾಯ ಯೋಜನೆ ಬಡ್ಡಿದರ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರದ ಬಾಂಡ್ ಆದಾಯ ಏರಿಕೆಯಾದ ಹಿನ್ನಲೆಯಲ್ಲಿ ಏಪ್ರಿಲ್ ನಿಂದ ಸಣ್ಣ ಉಳಿತಾಯ ಬಡ್ಡಿ ಹೆಚ್ಚಳವಾಗುವ ಸಂಭವವಿದೆ.

ಸರ್ಕಾರಿ ಬಾಂಡ್ ಗಳ ಆದಾಯ ಜನವರಿ 1 ರಿಂದ ಸರಾಸರಿ ಶೇ. 7.5 ರಷ್ಟು ಏರಿಕೆಯಾಗಿದೆ. ಕಳೆದ 9 ತಿಂಗಳಲ್ಲಿ ಬಾಂಡ್ ಗಳ ಆದಾಯದಲ್ಲಿ ಏರಿಕೆಯಾಗಿರುವುದರಿಂದ ಏಪ್ರಿಲ್ –ಜೂನ್ ತ್ರೈಮಾಸಿಕ ಅವಧಿಯಲ್ಲಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ಪಿ.ಪಿ.ಎಫ್., ಎನ್.ಎಸ್.ಸಿ, ಸುಕನ್ಯಾ ಸಮೃದ್ಧಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಮೊದಲಾದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಏರಿಕೆಯಾಗಲಿದೆ.

ಕೆಲವು ತಿಂಗಳಿಂದ ಸಣ್ಣ ಉಳಿತಾಯ ಯೋಜನೆ ಬಡ್ಡಿದರ ಇಳಿಕೆಯಾಗುತ್ತಿದ್ದು, ಕಳೆದ ತ್ರೈಮಾಸಿಕ ಅವಧಿಯಲ್ಲಿಯೂ ಅಲ್ಪ ಇಳಿಕೆಯಾಗಿತ್ತು. ಇದು ಹಿರಿಯ ನಾಗರಿಕರು ಸೇರಿದಂತೆ ಸಣ್ಣ ಉಳಿತಾಯ ಖಾತೆಗಳಲ್ಲಿ ಹೂಡಿಕೆ ಮಾಡಿದ್ದವರಿಗೆ ಚಿಂತೆ ಮೂಡಿಸಿತ್ತು. ಈಗ ಸರ್ಕಾರದ ಬಾಂಡ್ ಗಳ ಆದಾಯದಲ್ಲಿ ಏರಿಕೆಯಾಗಿರುವುದರಿಂದ ಸಣ್ಣ ಉಳಿತಾಯ ಬಡ್ಡಿ ದರ ಏರಿಕೆಯಾಗುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...