alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಗ್ರಾಹಕರ ಗಮನಕ್ಕೆ ಈ ಮುಖ್ಯ ಮಾಹಿತಿ

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬ್ಯಾಂಕ್‌ಗಳು ಎಂದಿನಂತೆ ತೆರೆದೇ ಇರಲಿದೆ. ಈ ಬಗ್ಗೆ ಅನಗತ್ಯ ಗೊಂದಲಗಳ ಅಗತ್ಯವಿಲ್ಲ ಎಂದು ಬ್ಯಾಂಕ್‌ ನೌಕರರ ರಾಷ್ಟ್ರೀಯ ಸಂಘ ಸ್ಪಷ್ಟಪಡಿಸಿದೆ.

ಸಾಮಾಜಿಕ ತಾಣ ಹಾಗೂ ವಾಟ್ಸಾಪ್‌ಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಬ್ಯಾಂಕ್‌ ನೌಕರರ ಮುಷ್ಕರದಿಂದಾಗಿ ಸೆ.2 ರಿಂದ 5ರ ವರೆಗೆ ಬ್ಯಾಂಕ್‌ಗಳು ಸಾಲು ರಜೆ ಇರಲಿದ್ದು, ದೈನಂದಿನ ವ್ಯವಹಾರ ಹಾಗೂ ಎಟಿಎಂಗಳ ಕಾರ್ಯ ನಿರ್ವಹಣೆಯಲ್ಲಿ ವ್ಯತ್ಯಾಸವಾಗಲಿದೆ ಎಂಬ ಸುದ್ದಿ ಹರಿದಾಡಿತ್ತು.

ರಾಷ್ಟ್ರೀಯ ಬ್ಯಾಂಕ್‌ ನೌಕರರ ಸಂಘದ ಅಧ್ಯಕ್ಷರಾದ ಅಶ್ವಿನ್ ರಾಣ, ಇದು ಸುಳ್ಳು ಸುದ್ದಿಯಾಗಿದ್ದು, ಬ್ಯಾಂಕ್‌, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಎಂದಿನಂತೆ ತೆರೆದೆ ಇರಲಿದೆ. ಸಾಲು ರಜೆ ಇರುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಆರ್‌ಬಿಐ ನೌಕರರು ಭವಿಷ್ಯ ನಿಧಿ ಹಾಗೂ ಪಿಂಚಣಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಟ್ಟಾಗಿ ಒಂದು ದಿನ ರಜೆ ಹಾಕಲಿದ್ದಾರೆ. ಇದು ಬ್ಯಾಂಕ್‌ನ ಚಟುವಟಿಕೆಗೆ ಸಮಸ್ಯೆಯಾಗದು ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 2ರಂದು ಭಾನುವಾರ, ಸೆಪ್ಟೆಂಬರ್ 3ರ ಸೋಮವಾರ ಜನ್ಮಾಷ್ಟಮಿ (ಸಾಂದರ್ಭಿಕ ರಜೆ). ಸೆಪ್ಟೆಂಬರ್ 4 ಮತ್ತು 5ರಂದು ಭಾರತೀಯ ರಿಸರ್ವ್ ಬ್ಯಾಂಕ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ದಿನಗಳಲ್ಲಿ ಬ್ಯಾಂಕ್ ಕಾರ್ಯಕಲಾಪಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ವಾಟ್ಸಾಪ್‌ನಲ್ಲಿ ಸಂದೇಶ ಕಳಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...