alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ

ಬೆಂಗಳೂರು: ಸುಪ್ರೀಂ ಕೋರ್ಟ್ ಹೆದ್ದಾರಿಗೆ ಹೊಂದಿಕೊಂಡಿದ್ದ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸಲು ಸೂಚನೆ ನೀಡಿದ ಬಳಿಕ ಅಪಾರ ಸಂಖ್ಯೆಯ ಮದ್ಯದ ಅಂಗಡಿಗಳು ಸ್ಥಳಾಂತರಗೊಂಡಿವೆ. ಇಲ್ಲವೇ ಬಂದ್ ಆಗಿವೆ.

ಇದರಿಂದಾಗಿ ಮದ್ಯ ಪ್ರಿಯರು ಬಾರ್ ಗಳನ್ನು ಹುಡುಕಿಕೊಂಡು ಹೋಗುವಂತಾಗಿತ್ತು. ನಗರ, ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗುವ ಹೆದ್ದಾರಿಗಳಲ್ಲಿ ಲೈಸೆನ್ಸ್ ಪಡೆದು ಮದ್ಯದ ಅಂಗಡಿ ನಡೆಸುತ್ತಿರುವವರಿಗೆ ನಿರ್ಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದೆ ಹೇಳಿತ್ತು.

ಈ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮೊದಲಾದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿಗಳಲ್ಲಿ ಹೊಂದಿಕೊಂಡಿರುವ ಮದ್ಯದಂಗಡಿಗಳ ಲೈಸೆನ್ಸ್ ನವೀಕರಣ ಮಾಡಲು ಅಬಕಾರಿ ಇಲಾಖೆ ಮುಂದಾಗಿದೆ.

ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಕುರಿತಾಗಿ ಪ್ರಯತ್ನ ನಡೆಸಲಾಗಿತ್ತಾದರೂ ಅದು ಫಲಿಸಲಿಲ್ಲ. ಕಳೆದ 2 ತಿಂಗಳಿಂದ ಸುಪ್ರೀಂ ಕೋರ್ಟ್ ತೀರ್ಪಿನ ಕಾರಣದಿಂದ ನಗರ, ಪಟ್ಟಣ ಪ್ರದೇಶಗಳ ಹೆದ್ದಾರಿಗಳಲ್ಲಿನ ಬಾರ್ ಬಂದ್ ಆಗಿ ಸುಮಾರು 500 ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ.

ಈಗ ಈ ಹಿಂದೆ ಸುಪ್ರೀಂ ಕೋರ್ಟ್ ನಗರ, ಪಟ್ಟಣ ವ್ಯಾಪ್ತಿಯ ಹೆದ್ದಾರಿಗಳಲ್ಲಿನ ಮದ್ಯದ ಅಂಗಡಿಗಳಿಗೆ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದನ್ನು ಆಧಾರವಾಗಿಟ್ಟುಕೊಂಡು ಲೈಸೆನ್ಸ್ ನವೀಕರಣಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.

ಲೈಸೆನ್ಸ್ ನವೀಕರಣದ ಬಳಿಕ ನಗರ, ಪಟ್ಟಣ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಬಂದ್ ಆಗಿದ್ದ ಮದ್ಯದ ಅಂಗಡಿಗಳು ಮತ್ತೆ ಆರಂಭವಾಗಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...