alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

Suprem

ನವದೆಹಲಿ: ದೇಶದಲ್ಲಿ ಕಲಬೆರಕೆ ಪ್ರಮಾಣ ಹೆಚ್ಚಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕಲಬೆರಕೆ ಕೂಡ ತಲೆನೋವಾಗಿ ಪರಿಣಮಿಸಿದೆ.

ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕಲಬೆರಕೆ ಆಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ದೇಶದ ಅನೇಕ ಕಡೆಗಳಲ್ಲಿ ರಾಜಕಾರಣಿಗಳು, ಪ್ರಭಾವಿಗಳ ಕೈಯಲ್ಲಿ ಪೆಟ್ರೋಲ್ ಬಂಕ್ ಇವೆ. ಅದರಲ್ಲಿಯೂ ಗ್ರಾಮೀಣ ಪ್ರದೇಶದ ಪೆಟ್ರೋಲ್ ಬಂಕ್ ಗಳಲ್ಲಿ ವ್ಯವಸ್ಥೆ ತೀರಾ ಹದಗೆಟ್ಟಿದೆ. ಭಾರೀ ಪ್ರಮಾಣದಲ್ಲಿಯೇ ಪೆಟ್ರೋಲ್, ಡೀಸೆಲ್ ಕಲಬೆರಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಸೀಮೆ ಎಣ್ಣೆ ಮಿಕ್ಸ್ ಮಾಡಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರನ್ನೊಳಗೊಂಡ ಪೀಠದಲ್ಲಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ಕಲಬೆರಕೆ ಮಾಡಿರುವ ದೂರಿನ ವಿಚಾರಣೆ ನಡೆಯುವಾಗ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಕ್ರಿಮಿನಲ್ ಗಳು, ರಾಜಕಾರಣಿಗಳು ಪ್ರಭಾವಿಗಳ ಕೈಯಲ್ಲೇ ಬಹುತೇಕ ಪೆಟ್ರೋಲ್ ಬಂಕ್ ಗಳು ಇದ್ದು, ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಲಬೆರಕೆ ಆಗುತ್ತಿದೆ. ದೇಶವನ್ನು ಮುನ್ನಡೆಸಬೇಕಾದ ರಾಜಕಾರಣಿಗಳೇ ಕಲಬೆರಕೆ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...