alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ನು ಮುಂದೆ ಇರಲ್ಲ ಚೆಕ್ ಬುಕ್ ಸೌಲಭ್ಯ..?

ಭೋಪಾಲ್: ಕಳೆದ ವರ್ಷ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ಹಣಕಾಸು ವಿಚಾರವಾಗಿ ಅನೇಕ ಬದಲಾವಣೆಗಳಾಗಿವೆ. ವಿವಿಧ ಮುಖಬೆಲೆಯ ಹೊಸ ನೋಟ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ನಗದು ರಹಿತ ವ್ಯವಹಾರಕ್ಕೆ ಒತ್ತು ನೀಡಲಾಗಿದೆ. ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಚೆಕ್ ಬುಕ್ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆಯುವ ಸಾಧ್ಯತೆ ಇದೆ.

ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಈ ಕುರಿತು ಮಾಹಿತಿ ನೀಡಿದ್ದು, ಡಿಜಿಟಲ್ ವಹಿವಾಟಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚೆಕ್ ಬುಕ್ ಸೌಲಭ್ಯ ಹಿಂಪಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಕರೆನ್ಸಿ ನೋಟುಗಳ ಮುದ್ರಣಕ್ಕೆ 25,000 ಕೋಟಿ ರೂ., ಸೆಕ್ಯುರಿಟಿ ಮತ್ತು ಇತರ ವ್ಯವಸ್ಥೆಗಳಿಗೆ 6000 ಕೋಟಿ ರೂ. ವೆಚ್ಚ ಮಾಡುತ್ತದೆ. ಅಲ್ಲದೇ, ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ಪಾವತಿಗೆ ಶೇ. 2 ರಷ್ಟು, ಡೆಬಿಟ್ ಕಾರ್ಡ್ ವಹಿವಾಟಿಗೆ ಶೇ. 1 ರಷ್ಟು ಶುಲ್ಕವನ್ನು ವಿಧಿಸುತ್ತವೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಶೇ. 5 ರಷ್ಟು ಮಂದಿ ಡೆಬಿಟ್ ಕಾರ್ಡ್, ಎ.ಟಿ.ಎಂ. ಕಾರ್ಡ್ ಗಳನ್ನು ನಗದುರಹಿತ ವಹಿವಾಟಿಗೆ ಬಳಸುತ್ತಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...