alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ನಲ್ಲಿ ಶೀಘ್ರದಲ್ಲೇ ಸೇರ್ಪಡೆಯಾಗಲಿದೆ ಈ ಸೌಲಭ್ಯ

ಸಾಮಾಜಿಕ ಜಾಲತಾಣಗಳಲ್ಲಿ ಕ್ಷಣಮಾತ್ರದಲ್ಲಿ ಹಬ್ಬುವ ಸುಳ್ಳು ಸುದ್ದಿಯಿಂದಾಗಿ ಅನಾಹುತಗಳು ಸಂಭವಿಸಿವೆ. ಈ ಕುರಿತು ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ ಕೂಡ ಚಿಂತಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

ಇನ್ನು ಮುಂದೆ ವಾಟ್ಸಾಪ್ ನಲ್ಲಿ ಯಾವುದಾದರೂ ಸಂದೇಶ ಬಂದರೆ ಅದು ನಂಬಲರ್ಹ ಮೂಲಗಳಿಂದ ಬಂದಿದೆಯೇ ಅಥವಾ ತಮಗೆ ಬಂದ ಸಂದೇಶವನ್ನು ಪರಿಶೀಲಿಸದೆ ಫಾರ್ವರ್ಡ್ ಮಾಡಲಾಗಿದೆಯೇ ಎಂಬುದನ್ನು ತಿಳಿಸುತ್ತದೆ.

ಇನ್ನೊಂದು ವಾರದಲ್ಲಿ ಈ ಸೌಲಭ್ಯ ವಾಟ್ಸಾಪ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಇದನ್ನು ಅಪ್ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಇದಾದ ಬಳಿಕ ವಾಟ್ಸಾಪ್ ನಲ್ಲಿ ಬಂದ ಸಂದೇಶ ಫಾರ್ವರ್ಡ್ ಮಾಡಲಾಗಿದ್ದರೆ ಇದಕ್ಕೆ ಫಾರ್ವರ್ಡೆಡ್ ಎಂಬ ಹಣೆಪಟ್ಟಿಯೂ ಇರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...