alex Certify
ಕನ್ನಡ ದುನಿಯಾ       Mobile App
       

Kannada Duniya

ಶೇ.1ರ ಬಡ್ಡಿಯಲ್ಲಿ 1 ಲಕ್ಷದವರೆಗೆ ಸಾಲ

ಡೆಹ್ರಾಡೂನ್ ಮಹಿಳೆಯರಿಗೆ ಅಲ್ಲಿನ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಅತಿ ಕಡಿಮೆ ಬಡ್ಡಿಯಲ್ಲಿ ಸರ್ಕಾರ ಮಹಿಳೆಯರಿಗೆ ಸಾಲ ನೀಡಲಿದೆ. ಶೇಕಡಾ 1ರ ಬಡ್ಡಿ ದರದಲ್ಲಿ ಒಂದು ಲಕ್ಷ ರೂಪಾಯಿ ಸಾಲ ನೀಡಲಿದೆ.

ಮಾರ್ಚ್ 8ರಂದು ಅಂತರಾಷ್ಟ್ರೀಯ ಮಹಿಳಾ ದಿನದಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಸಬಲೀಕರಣ ವಿಭಾಗದಡಿ ಪಶು ಸಂಗೋಪನೆ ಹಾಗೂ ಮೀನುಗಾರಿಕೆ ನಡೆಸುವ ಮಹಿಳೆಯರಿಗೆ ಈ ಸೌಲಭ್ಯ ಸಿಗಲಿದೆ.

ಸಣ್ಣ ಕೃಷಿಕರಿಗೂ ಸರ್ಕಾರ ಕಡಿಮೆ ಬಡ್ಡಿ ದರದಲ್ಲಿ ಒಂದು ಲಕ್ಷ ರೂಪಾಯಿವರೆಗೆ ಸಾಲ ನೀಡ್ತಿದೆ. ಐದು ತಿಂಗಳಲ್ಲಿ ಸುಮಾರು 1.25 ಲಕ್ಷಕ್ಕೂ ಹೆಚ್ಚು ಸಣ್ಣ ಕೃಷಿಕರು ಇದ್ರ ಲಾಭ ಪಡೆದಿದ್ದಾರೆ ಎನ್ನಲಾಗಿದೆ. ಶೇಕಡಾ 1ರ ಬಡ್ಡಿ ದರದಲ್ಲಿ ವಿಧವೆಯರು, ಪತಿಯಿಂದ ದೂರವಾದ ಮಹಿಳೆಯರು ಹಾಗೂ ಅವಿವಾಹಿತ ಮಹಿಳೆಯರಿಗೆ ಒಂದು ಲಕ್ಷದವರೆಗೆ ಸಾಲ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...