alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಕೆಲಸದ ಅವಧಿಯಲ್ಲಿ ಬದಲಾವಣೆ ಸಾಧ್ಯತೆ

bank

ಬ್ಯಾಂಕ್ ಬಾಗಿಲು ತೆರೆಯುವ ಹಾಗೂ ಬಾಗಿಲು ಮುಚ್ಚುವ ಸಮಯ ಬದಲಾಗುವ ಸಾಧ್ಯತೆಯಿದೆ. ಬೆಳಿಗ್ಗೆ 10 ಗಂಟೆಗೆ ಬಾಗಿಲು ತೆಗೆಯುತ್ತಿದ್ದ ಬ್ಯಾಂಕ್ ಗಳು ಇನ್ಮುಂದೆ ಬೆಳಿಗ್ಗೆ 9.30ಕ್ಕೆ ಬಾಗಿಲು ತೆಗೆಯುವ ಸಾಧ್ಯತೆಯಿದೆ. ಹಾಗೆ ನಾಲ್ಕು ಗಂಟೆಯವರೆಗೆ ಗ್ರಾಹಕರಿಗೆ ಸೇವೆ ನೀಡಲಿದೆ.

ಒಂದು ವೇಳೆ ಈ ಸಮಯ ನಿಗಧಿಯಾದಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಬ್ಯಾಂಕ್ ಸಿಬ್ಬಂದಿ ರಜೆ ಪಡೆಯಲಿದ್ದಾರೆ. ಶನಿವಾರ ಹಾಗೂ ಭಾನುವಾರ ಬ್ಯಾಂಕ್ ಬಾಗಿಲು ಮುಚ್ಚಲಿದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ ಹಾಗೂ  ಬ್ಯಾಂಕ್ ಒಕ್ಕೂಟದ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಇದೇ ತಿಂಗಳು ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದ್ದು ಅಂತಿಮ ನಿರ್ಧಾರ ಹೊರಬೀಳಲಿದೆ. ಸದ್ಯ ಆರರಿಂದ ಆರುವರೆ ತಾಸು ಬ್ಯಾಂಕ್ ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ.

ಒಂದು ವೇಳೆ ಸಮಯ ಬದಲಾದಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದೆ. ಆದ್ರೆ ವಾರದಲ್ಲಿ ಐದು ದಿನ ಮಾತ್ರ ಬ್ಯಾಂಕ್ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಈ ಹಿಂದೆ ಎರಡನೇ ಹಾಗೂ ನಾಲ್ಕನೇ ಶನಿವಾರ ರಜೆ ಇರುತ್ತಿತ್ತು. ಸಮಯ ವಿಸ್ತರಣೆಯಾದ್ರೆ ಎಲ್ಲ ಶನಿವಾರ ಹಾಗೂ ಭಾನುವಾರ ಬ್ಯಾಂಕ್ ಮುಚ್ಚಲಿದೆ.

ಬ್ಯಾಂಕ್ ನಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ರೆ ಬ್ಯಾಂಕ್ ಅವಧಿ ಕಡಿಮೆ ಇರುವುದರಿಂದ ಗ್ರಾಹಕರಿಗೆ ಸ್ವಲ್ಪ ತೊಂದರೆಯಾಗ್ತಿದೆ. ಇದನ್ನು ತಪ್ಪಿಸಲು ಅವಧಿ ವಿಸ್ತರಣೆಗೆ ಸರ್ಕಾರ ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...