alex Certify
ಕನ್ನಡ ದುನಿಯಾ       Mobile App
       

Kannada Duniya

ಸದ್ಯಕ್ಕೆ ಈ ಜಿಲ್ಲೆಗಳಿಗೆ ಕಾಲಿಡಬೇಡಿ ಎಂದ ಕೇರಳ ಸರ್ಕಾರ

ಕೇರಳದಲ್ಲಿ ಈಗ ಕಾಣಿಸಿಕೊಂಡಿರುವ ನಿಫಾ ವೈರಸ್ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ನಿಫಾ ವೈರಸ್ ಗೆ ಹತ್ತಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಫಾ ವೈರಸ್ ಸೋಂಕಿಗೆ ತುತ್ತಾಗಿರುವವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಸರ್ಕಾರ, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಮಧ್ಯೆ ಸೋಂಕು ಕಾಣಿಸಿಕೊಂಡಿರುವ ಕೇರಳದ ನಾಲ್ಕು ಜಿಲ್ಲೆಗಳಾದ, ಕೋಝಿಕೋಡ್, ಮಲಪ್ಪುರಂ, ವಯನಾಡ್ ಹಾಗೂ ಕಣ್ಣೂರಿಗೆ ಪ್ರವಾಸಿಗರು ಹೋಗದಂತೆ ಸೂಚಿಸಲಾಗಿದೆ.
ನಿಫಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ಕಾರಣ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಭೇಟಿ ನೀಡುವುದನ್ನು ಮುಂದೂಡುವಂತೆ ತಿಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...