alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷಣ ಮಾತ್ರದಲ್ಲಿ ಮಾಯವಾಗುತ್ತೆ ಹೊಟ್ಟೆ ನೋವು

dard

ಮಳೆಗಾಲದಲ್ಲಿ ಹವಾಮಾನ ಬದಲಾವಣೆ ಹಾಗೂ ಕೆಲವೊಂದು ಆಹಾರ ಸೇವನೆಯಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಈ ನೋವು ಹೆಚ್ಚಾಗುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ಔಷಧಿ ತೆಗೆದುಕೊಳ್ಳದಿದ್ದಲ್ಲಿ ಮತ್ತೊಂದು ಸಮಸ್ಯೆ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಹೊಟ್ಟೆ ನೋವನ್ನು ತಕ್ಷಣ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಓಮು : ಜೀರ್ಣಕ್ರಿಯೆಗೆ ಓಮು ಬಹಳ ಒಳ್ಳೆಯದು. ಇದು ಅಜೀರ್ಣ ಸಮಸ್ಯೆಗೆ ಮುಕ್ತಿ ನೀಡುತ್ತದೆ. ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ್ರೆ ಬಿಸಿ ನೀರಿಗೆ ಓಮನ್ನು ಸೇರಿಸಿ ಕುಡಿಯಿರಿ.

ಇಂಗು : ಹೊಟ್ಟೆ ನೋವಿಗೆ ಇಂಗು ರಾಮಬಾಣ. ನೀರಿಗೆ ಇಂಗನ್ನು ಬೆರೆಸಿ ಕುಡಿಯುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.

ಪುದೀನಾ : ಆಹಾರದ ರುಚಿ ಹೆಚ್ಚಿಸಲು ಹಾಗೂ ಸುವಾಸನೆಗಾಗಿ ಪುದೀನಾ ಬಳಸಲಾಗುತ್ತದೆ. ಹೊಟ್ಟೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಪುದೀನಾ ಟೀ ಮಾಡಿ ಕುಡಿಯುವುದು ಒಳ್ಳೆಯದು.

ಜೀರಿಗೆ ಮತ್ತು ಕರಿಮೆಣಸು : ಗ್ಯಾಸ್ ಸಮಸ್ಯೆ ಅಥವಾ ಹೊಟ್ಟೆ ನೋವು ಕಾಣಿಸಿಕೊಂಡಲ್ಲಿ ಜೀರಿಗೆ, ಕರಿ ಮೆಣಸಿನ ಪುಡಿ ಜೊತೆ ಉಪ್ಪು ಬೆರೆಸಿ ತಿನ್ನುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...