alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿದಿನ ಮೂರು ಬಾಳೆಹಣ್ಣು ತಿಂದು ಆರೋಗ್ಯ ಕಾಪಾಡಿಕೊಳ್ಳಿ

banana

ಬಾಳೆ ಹಣ್ಣು ತಿನ್ನೋದ್ರಿಂದ ತೂಕ ಜಾಸ್ತಿಯಾಗುತ್ತೆ ಎಂದು ಅನೇಕರು ನಂಬಿದ್ದಾರೆ. ಆದ್ರೆ ಇದು ತಪ್ಪುಕಲ್ಪನೆ. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ.

ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

ಬ್ರಿಟನ್ ಹಾಗೂ ಇಟಲಿ ವಿಜ್ಞಾನಿಗಳು ನಡೆಸಿದ ಸಂಶೋಧನೆ ಪ್ರಕಾರ ಬೆಳಿಗ್ಗೆ ಉಪಹಾರದ ಜೊತೆ ಮಧ್ಯಾಹ್ನ ಊಟದ ಜೊತೆ ಹಾಗೂ ಸಂಜೆ ಒಂದು ಬಾಳೆಹಣ್ಣು ಸೇವನೆ ಮಾಡಬೇಕು. ಮೆದುಳಿನಲ್ಲಿ ರಕ್ತಹೆಪ್ಪುಗಟ್ಟುವ ಪ್ರಮಾಣವನ್ನು ಇದು ಕಡಿಮೆ ಮಾಡುತ್ತದೆ. ಬಾಳೆಹಣ್ಣು ಸೇವನೆ ಮಾಡುವವರು ಶೇಕಡಾ 21ರಷ್ಟು ರಕ್ತಹೆಪ್ಪುಗಟ್ಟುವ ಅಪಾಯದಿಂದ ಬಚಾವ್ ಆಗ್ತಾರೆ. ಹಾಗೆ ಸ್ಟ್ರೋಕ್ ಅಪಾಯವನ್ನು ಇದು ತಡೆಯುತ್ತದೆ.

ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಮಹಿಳೆಯರು ಬಾಳೆ ಹಣ್ಣು ಸೇವನೆ ಮಾಡುವುದರಿಂದ ಅವರ ಮೂಳೆಗಳು ಗಟ್ಟಿಯಾಗುತ್ತವೆ. ಕೀಳರಿಮೆ ಕಡಿಮೆಯಾಗುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುತ್ತದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...