alex Certify
ಕನ್ನಡ ದುನಿಯಾ       Mobile App
       

Kannada Duniya

1 ಲೀ. ಪೆಟ್ರೋಲ್ ಗೆ 100 ಕಿ.ಮೀ. ಮೈಲೇಜ್ ಕೊಡುತ್ತೆ ಈ ಕಾರ್ !

renault-eolab-030216-04

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿನರಲ್ ವಾಟರ್ ಗಿಂತಲೂ ಕಡಿಮೆಗೆ ತೈಲ ಸಿಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಮಾತ್ರ ಬೆಲೆಯನ್ನು ಪೈಸೆಗಳ ಲೆಕ್ಕದಲ್ಲಿ ಇಳಿಕೆ ಮಾಡಲಾಗುತ್ತಿದೆ. ತೈಲ ಬೆಲೆ ಇಳಿಕೆಯ ಪ್ರಯೋಜನ ಗ್ರಾಹಕರಿಗೆ ಸಿಗದಂತಾಗಿದೆ.

ಪೆಟ್ರೋಲ್ ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜಾಸ್ತಿ ಮೈಲೇಜ್ ಕೊಡುವ ವಾಹನಗಳಿಗೆ ಬೇಡಿಕೆ ಜಾಸ್ತಿ ಇದ್ದೇ ಇರುತ್ತದೆ. ಹೀಗೆ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ತಯಾರಿಕಾ ಕಂಪನಿಗಳು ಮೈಲೇಜ್ ಜಾಸ್ತಿ ಕೊಡುವ ವಾಹನಗಳನ್ನು ತಯಾರಿಸಲು ಒತ್ತು ಕೊಡುತ್ತವೆ. ಮೈಲೇಜ್ ನಲ್ಲಿ ಎಲ್ಲರ ಹುಬ್ಬೇರುವಂತೆ ಮಾಡುವ ಕಾರೊಂದನ್ನು ರೆನಾಲ್ಟ್ ಕಂಪನಿ ಅಭಿವೃದ್ಧಿಪಡಿಸಿದೆ. ಫ್ರಾನ್ಸ್ ಮೂಲದ ರೆನಾಲ್ಟ್ ಕಂಪನಿ ಅಭಿವೃದ್ಧಿಪಡಿಸಿರುವ ಈ ಕಾರ್ 1 ಲೀಟರ್ ಪೆಟ್ರೋಲ್ ಗೆ ಬರೋಬ್ಬರಿ 100 ಕಿಲೋ ಮೀಟರ್ ಓಡುತ್ತದೆ.

ಗ್ರೇಟರ್ ನೋಯ್ಡಾದಲ್ಲಿ ನಡೆಯುತ್ತಿರುವ ಆಟೋ ಎಕ್ಸ್ ಪೋನಲ್ಲಿ ರೆನಾಲ್ಟ್ ಕಂಪನಿ ಪ್ರದರ್ಶನಕ್ಕೆ ಇಟ್ಟಿರುವ ಈ 100 ಕಿಲೋ ಮೀಟರ್ ಮೈಲೇಜ್ ಕೊಡುವ ಕಾರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಕಾರಿನ ಬಿಡಿಭಾಗಗಳು ಲೈಟ್ ವೇಯ್ಟ್ ಆಗಿದ್ದು, ಕಾರಿನ ತೂಕವೂ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಿತ ತಂತ್ರಜ್ಞಾನ ಅಳವಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...