alex Certify
ಕನ್ನಡ ದುನಿಯಾ       Mobile App
       

Kannada Duniya

ಮನುಷ್ಯನ ಆಯಸ್ಸು ಎಷ್ಟು ಗೊತ್ತಾ…?

old-age

ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ.

ಇತ್ತೀಚೆಗಷ್ಟೆ ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120 ವರ್ಷಕ್ಕಿಂತ್ಲೂ ಅಧಿಕ ಸಮಯ ಬದುಕಿರಬಲ್ಲ. ಹಾಗಾಗಿ ಮನುಷ್ಯನ ಆಯುಷ್ಯಕ್ಕೆ ಯಾವುದೇ ಮಿತಿ ಇಲ್ಲ ಅಂತಾ ಕೆಲವು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವ್ಯಕ್ತಿಯೊಬ್ಬ 2300 ರ ವರೆಗೆ ಬದುಕಿದ್ರೆ ಅವರ ವಯಸ್ಸು 150 ವರ್ಷಗಳನ್ನೂ ದಾಟಿಬಿಡುತ್ತದೆ. ಹಾಗಾಗಿ ಮನುಷ್ಯನ ಆಯಸ್ಸು ಕೇವಲ 115 ವರ್ಷ ಎಂದು ಹೇಳಲು ಸಾಧ್ಯವೇ ಇಲ್ಲ. ಮನುಷ್ಯದ ದೀರ್ಘಾಯುಷ್ಯದ ರಹಸ್ಯಕ್ಕೆ ಉತ್ತರ ಇದಲ್ಲ ಎನ್ನುತ್ತಿದ್ದಾರೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಕಾಲವೇ ಉತ್ತರಿಸಬೇಕು ಅಂತಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...